ರಾಜ್ಯದಲ್ಲಿ ಇನ್ನೂ ಒಂದು ವಾರ ಮಳೆ ಸಾಧ್ಯತೆ

Update: 2018-06-27 12:40 GMT

ಬೆಂಗಳೂರು, ಜೂ. 27: ಕಳೆದ ಕೆಲ ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಮತ್ತೆ ಆರ್ಭಟಿಸುತ್ತಿದ್ದು, ಇಂದಿನಿಂದ ಇನ್ನೂ ಒಂದು ವಾರಗಳ ಕಾಲ ಗಾಳಿ ಸಹಿತ ಅಬ್ಬರದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ-ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಮಾಹಿತಿ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News