ಬೆಂಗಳೂರು: ಬೈಕ್ ಗೆ ನೀರಿನ ಟ್ಯಾಂಕರ್ ಢಿಕ್ಕಿ; ಉದ್ಯೋಗಿ ಮೃತ್ಯು
Update: 2018-06-27 19:13 IST
ಬೆಂಗಳೂರು, ಜೂ.27: ನೀರಿನ ಟ್ಯಾಂಕರ್ ಬೈಕ್‌ಯೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಉದ್ಯೋಗಿ ಮೃತಪಟ್ಟಿರುವ ದುರ್ಘಟನೆ ಇಲ್ಲಿ ಎಚ್‌ಎಎಲ್ ವಿಮಾನ ನಿಲ್ದಾಣ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆರ್‌ಟಿ ನಗರದ ವಿಕಾಸ್ ಕುಮಾರ್ (34) ಮೃತಪಟ್ಟ ವ್ಯಕ್ತಿಯಾಗಿದ್ದು, ಎಚ್‌ಎಎಲ್‌ನ ಖಾಸಗಿ ಸಾಫ್ಟ್‌ವೇರ್ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಮಂಗಳವಾರ ರಾತ್ರಿ 7:30ರ ಸುಮಾರಿಗೆ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ಬರುತ್ತಿದ್ದರು. ಮಾರ್ಗಮಧ್ಯೆ ನೀರಿನ ಟ್ಯಾಂಕರ್ ಢಿಕ್ಕಿ ಹೊಡೆದು ಕೆಳಗೆ ಬಿದ್ದು, ವಿಕಾಸ್ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತ ನಡೆಯುತ್ತಿದ್ದಂತೆ ಟ್ಯಾಂಕರ್ ಚಾಲಕ ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿರುವ ಎಚ್‌ಎಎಲ್ ವಿಮಾನ ನಿಲ್ದಾಣ ಸಂಚಾರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.