×
Ad

8 ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2018-06-27 20:17 IST

ಬೆಂಗಳೂರು, ಜೂ.27: ರಾಜ್ಯ ಸರಕಾರವು ಆಡಳಿತಾತ್ಮಕ ದೃಷ್ಟಿಯಿಂದ ಎಂಟು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಂ.ಲಕ್ಷ್ಮಿನಾರಾಯಣರನ್ನು ಸಮಾಜ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿಯನ್ನು ಮುಖ್ಯಮಂತ್ರಿಯ ಪ್ರಧಾನ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಅಲ್ಲದೆ, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಪ್ರಭಾರ ವಹಿಸಲಾಗಿದೆ.

ವಸತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್‌ರನ್ನು ಮೈಸೂರಿನ ಆಡಳಿತಾತ್ಮಕ ತರಬೇತಿ ಸಂಸ್ಥೆಯ ಮಹಾ ನಿರ್ದೇಶಕ, ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಟಿ.ಕೆ.ಅನಿಲ್‌ಕುಮಾರ್‌ರನ್ನು ವಸತಿ ಇಲಾಖೆಯ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.

ಅಬಕಾರಿ ಇಲಾಖೆಯ ಆಯುಕ್ತ ಮನಿಷ್ ಮೌದ್ಗಿಲ್‌ರನ್ನು ಬೆಂಗಳೂರಿನ ಸರ್ವೆ ಹಾಗೂ ಭೂ ದಾಖಲೆಗಳ ಇಲಾಖೆಯ ಆಯುಕ್ತರನ್ನಾಗಿ, ಮುಖ್ಯಮಂತ್ರಿಯ ಹೆಚ್ಚುವರಿ ಕಾರ್ಯದರ್ಶಿ ಬಿ.ಎಸ್.ಶೇಖರಪ್ಪರನ್ನು ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ನಿರ್ದೇಶನಾಲಯ(ಕಾಡಾ)ದ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿಶೇಷ ಆಯುಕ್ತ(ಯೋಜನೆಗಳು) ಬಿ.ಎಂ.ವಿಜಯಭಾಸ್ಕರ್‌ರನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಯನ್ನಾಗಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಜಂಟಿ ಆಯುಕ್ತ(ದಕ್ಷಿಣ ವಲಯ) ನಿತೇಶ್ ಪಾಟೀಲ್‌ರನ್ನು ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತ(ಆಡಳಿತ) ನಳಿನಿ ಅತುಲ್‌ರನ್ನು ರಾಜ್ಯ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮ(ಕೆಯುಐಡಿಎಫ್‌ಸಿ)ದ ಜಂಟಿ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News