ಮೈತ್ರಿ ಸರಕಾರದ ಆಯುಷ್ಯ ಐದು ವರ್ಷ: ಸಚಿವ ಪ್ರಿಯಾಂಕ್ ಖರ್ಗೆ
Update: 2018-06-27 20:28 IST
ಕಲಬುರ್ಗಿ, ಜೂ. 27: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದ ಆಯುಷ್ಯ ಐದು ವರ್ಷ. ಈ ಬಗ್ಗೆ ಯಾವುದೇ ಗೊಂದಲವಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಇಂದಿಲ್ಲಿ ಸ್ಪಷ್ಟಣೆ ನೀಡಿದ್ದಾರೆ.
ಬುಧವಾರ ಸಚಿವರಾದ ಬಳಿಕ ಇದೇ ಪ್ರಥಮ ಬಾರಿಗೆ ಚಿತ್ತಾಪುರ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿದ ಸಂದರ್ಭದಲ್ಲಿ ಕಾರ್ಯಕರ್ತರ ಅಭಿನಂದನೆ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಮೈತ್ರಿ ಸರಕಾರದಲ್ಲಿ ತಾನು ಸಚಿವನಾಗಿದ್ದು, ಮೊದಲು ಸರಕಾರದ ಪರ. ಆ ಬಳಿಕ ಪಕ್ಷದ ಪರ ಎಂದು ಸ್ಪಷ್ಟಪಡಿಸಿದರು.
ಮೈತ್ರಿ ಸರಕಾರದ ಆಯುಷ್ಯ ಒಂದೇ ವರ್ಷ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿಕೆ ನೀಡಿಲ್ಲ. ಬದಲಿಗೆ ಅವರು ಬಜೆಟ್ ಮಂಡನೆ ಕುರಿತು ಮಾತನಾಡಿದ್ದಾರೆ. ಈ ಬಗ್ಗೆ ಸಮನ್ವಯ ಸಮಿತಿಯಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಪ್ರಿಯಾಂkf ಖರ್ಗೆ ಹೇಳಿದರು.