×
Ad

ಹನೂರು: ಕಂದಾಯ ಹಾಗೂ ಪಿಂಚಣಿ ಅದಾಲತ್ ಕಾರ್ಯಕ್ರಮ

Update: 2018-06-27 20:59 IST

ಹನೂರು,ಜೂ.27: ಪಹಣಿ ಪತ್ರದಲ್ಲಿನ ಲೋಪದೋಷಗಳಿಗೆ ಸಂಬಂಧಿಸಿದಂತೆ ರೈತರು ಅಗತ್ಯ ದಾಖಲೆಗಳನ್ನು ನೀಡುವುದರ ಮೂಲಕ ದೋಷರಹಿತ ಆರ್‍ಟಿಸಿಯನ್ನು ಪ್ರತಿಯೊಬ್ಬರೂ ಹೊಂದಬೇಕು ಎಂದು ರಾಜಸ್ವ ನಿರೀಕ್ಷಕ ಮಾದೇಶ್ ತಿಳಿಸಿದರು.

ಹನೂರು ಸಮೀಪದ ಮಂಗಲ ಗ್ರಾಮದಲ್ಲಿ ಆಯೋಜಿಸಿದ್ಧ ಕಂದಾಯ ಹಾಗೂ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಮಾತನಾಡಿದರು. 
ಕಂದಾಯ ಅದಾಲತ್ ಕಾರ್ಯಕ್ರಮ ಸರ್ಕಾರದ ಮಹತ್ವ ಕಾಂಕ್ಷಿ ಕಾರ್ಯಕ್ರಮವಾಗಿದ್ದು, ಸರ್ಕಾರದ ಯೋಜನೆಗಳನ್ನು ಜನರ ಬಳಿಗೆ ಕೊಂಡೊಯ್ಯುವ ಮೂಲಕ ಜನಸ್ನೇಹಿಯಾಗಿದೆ. ಇದರಿಂದ ಅರ್ಜಿಗಳ ವಿಲೇವಾರಿಯೂ ಪಾರದರ್ಶಕವಾಗಿದ್ದು, ಸ್ಥಳದಲ್ಲಿಯೇ ಸಮಸ್ಯೆಗಳು ನಿವಾರಣೆಯಾಗಲಿವೆ. ಈ ದಿಸೆಯಲ್ಲಿ ಕಂದಾಯ ಇಲಾಖೆ ಕಳೆದ 4 ವರ್ಷಗಳಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ರೈತರು ಪಹಣಿ ಪತ್ರದಲ್ಲಿನ ಹೆಸರು, ವಿಸ್ತೀರ್ಣದಲ್ಲಿನ ಲೋಪದೋಷ, ಪೌತಿ ಖಾತೆ ಹಾಗೂ ಜಮೀನಿಗೆ ಸಂಬಂಧಿಸಿದ ದಾಖಲೆಗಳಲ್ಲಿನ ಇನ್ನಿತರ ದೋಷಗಳನ್ನು ಸರಿಪಡಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಲೆಕ್ಕಿಗ ವಿ.ಮಾದೇಶ್ ಹಾಗೂ ಗ್ರಾಮಸ್ಥರು ಹಾಜರಿದ್ದರು. 
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News