ಮಂಡ್ಯ: ಎಸ್ಪಿ ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ
Update: 2018-06-27 22:09 IST
ಮಂಡ್ಯ, ಜೂ.27: ಪೊಲೀಸರು ದೂರು ಸ್ವೀಕರಿಸಲಿಲ್ಲವೆಂದು ಮನನೊಂದ ಮಹಿಳೆ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಬಳಿ ಸೀಮೆಎಣ್ಣೆ ಸುರಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಡೆದಿದೆ.
ತಾಲೂಕಿನ ಹೊಳಲು ಗ್ರಾಮದ ಸುಕನ್ಯಾ(35) ಎಂಬ ಮಹಿಳೆಯೇ ಆತ್ಮಹತ್ಯೆಗೆ ಯತ್ನಿಸಿದವರು. ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಆಕೆಯನ್ನು ರಕ್ಷಿಸಿ ಮುಂದಿನ ಕ್ರಮವಹಿಸಿದ್ದಾರೆ.
ತನ್ನ ಪುತ್ರಿ ಸಾವಿನಿಂದ ಹತಾಶರಾಗಿರುವ ಸುಕನ್ಯಾ, ಪತಿ ಹಾಗೂ ಅತ್ತೆ ಕಿರುಕುಳ ನೀಡುತ್ತಿದ್ದಾರೆಂದು ದೂರು ನೀಡಲು ತೆರಳಿದಾಗ ಪೊಲೀಸರು ದೂರು ಸ್ವೀಕರಿಸಲಿಲ್ಲ ಎನ್ನಲಾಗಿದೆ.