×
Ad

ಮಂಡ್ಯ: ಖಾಸಗಿ ಕೃಷಿ ಕಾಲೇಜು ಅನುಮತಿ ರದ್ದತಿಗೆ ಒತ್ತಾಯಿಸಿ ಧರಣಿ

Update: 2018-06-27 22:11 IST

ಮಂಡ್ಯ, ಜೂ.27: ಖಾಸಗಿ ಕೃಷಿ ಕಾಲೇಜುಗಳಿಗೆ ಅನುಮತಿ ನೀಡಿರುವುದನ್ನು ರದ್ದುಪಡಿಸುವಂತೆ ಒತ್ತಾಯಿಸಿ ವಿ.ಸಿ.ಫಾರಂ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ನಗರದಲ್ಲಿ ಬುಧವಾರ ಧರಣಿ ನಡೆಸಿದರು. 

ಕಳೆದ 12 ದಿನಗಳಿಂದ ವಿ.ಸಿ.ಫಾರಂನ ಕೃಷಿ ಮಹಾವಿದ್ಯಾಲಯದ ಎದುರು ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು, ನಗರಕ್ಕಾಗಮಿಸಿ ಮೆರವಣಿಗೆಯಲ್ಲಿ ತೆರಳಿ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿಸದರು. 2010ರಲ್ಲಿ ಕೃಷಿ ವಿಶ್ವವಿದ್ಯಾನಿಲಯಗಳ ಕಾಯ್ದೆ ತಿದ್ದುಪಡಿ ತಂದು, ಖಾಸಗಿ ಕೃಷಿ ಕಾಲೇಜು ಪ್ರಾರಂಭಿಸಲು ಅನುಮತಿ ನೀಡಲಾಯಿತು. ಈ ಖಾಸಗಿ ಕಾಲೇಜುಗಳು ಶಿಕ್ಷಣ, ಸಂಶೋಧನೆ ಮತ್ತು ವಿಸ್ತರಣೆ ವಿಭಾಗದಲ್ಲಿ ಹಲವಾರು ನ್ಯೂನ್ಯತೆ ಹೊಂದಿದ್ದು, ನಿರುದ್ಯೋಗ ಸೃಷ್ಟಿ ಮಾಡುವುದಲ್ಲದೆ ಗುಣಮಟ್ಟದ ಶಿಕ್ಷಣ ನೀಡದೆ ವಿದ್ಯಾರ್ಥಿಗಳ ಜೀವನ ಹಾಳು ಮಾಡುತ್ತಿವೆ ಎಂದು ಅವರು ಆರೋಪಿಸಿದರು.

ರಾಜ್ಯದ ಎಲ್ಲಾ ಸರಕಾರಿ ಕೃಷಿ ಕಾಲೇಜುಗಳಲ್ಲಿ 2000 ವಿದ್ಯಾರ್ಥಿಗಳು ದಾಖಲಾಗಿದ್ದರೆ, ರೈ ಟೆಕ್ನಾಲಜಿ ವಿಶ್ವವಿದ್ಯಾಲಯದಲ್ಲಿ ಪ್ರಸ್ತುತ ಒಂದು ವರ್ಷಕ್ಕೆ 1 ಸಾವಿರ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಇದರಿಂದ ನಿರುದ್ಯೋಗ ಮತ್ತು ಗುಣಮಟ್ಟದ ಶಿಕ್ಷಣದ ಕೊರತೆಗೆ ದಾರಿಯಾಗಿದೆ ಎಂದು ಅವರು ಹೇಳಿದರು. ಕೃಷಿ ವಿಶ್ವವಿದ್ಯಾನಿಲಯಗಳ 1963ರ ಕಾಯ್ದೆಗೆ ತಿದ್ದುಪಡಿ ತಂದು ಶಾಶ್ವತವಾಗಿ ಖಾಸಗಿ ಕೃಷಿ ಕಾಲೇಜುಗಳನ್ನು ರಾಜ್ಯದಲ್ಲಿ ರದ್ದುಪಡಿಸಬೇಕು ಎಂದು ಅವರು ಒತ್ತಾಯಿಸಿದರು. 

ವಿದ್ಯಾರ್ಥಿ ಮುಖಂಡರಾದ ನವೀನ್, ಅರುಣ್‍ರಾಜ್, ಉತ್ತಯ್ಯ, ಚೇತನ್, ದರ್ಶನ್ ನೇತೃತ್ವವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News