ಮೈಸೂರು: ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಮೃತ್ಯು
Update: 2018-06-27 22:35 IST
ಮೈಸೂರು,ಜೂ.27: ವೆಲ್ಡಿಂಗ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸಾವನ್ನಪ್ಪಿದ ಘಟನೆ ಮೈಸೂರಿನ ಲಕ್ಷ್ಮಿಪುರಂನ ಮನೆಯೊಂದರಲ್ಲಿ ನಡೆದಿದೆ.
ಮೃತನನ್ನು ರಮಾಬಾಯಿನಗರದ ನಿವಾಸಿ ರವಿ (35) ಎಂದು ಗುರುತಿಸಲಾಗಿದ್ದು,ಲಕ್ಷ್ಮಿಪುರಂನ ಜ್ಞಾನೇಶ್ ಎಂಬವರ ಮನೆಯಲ್ಲಿ ಕೆಲಸ ಮಾಡುವಾಗ ದುರ್ಘಟನೆ ಸಂಭವಿಸಿದೆ. ವೆಲ್ಡಿಂಗ್ ಕೆಲಸ ಮಾಡುವಾಗ ತುಂಡಾಗಿದ್ದ ಕರೆಂಟ್ ವೈರ್ ತುಳಿದಿದ್ದು, ಈ ವೇಳೆ ವಿದ್ಯುತ್ ಶಾಕ್ ಹೊಡೆದು ಅಸ್ವಸ್ಥನಾಗಿದ್ದ. ನಂತರ ಆತನನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ರವಿ ಸಾವನ್ನಪ್ಪಿದ್ದು, ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.