ಯುಪಿಸಿಎಲ್‌ನಿಂದ 3242 ವಿದ್ಯಾರ್ಥಿಗಳಿಗೆ ಪರಿಕರ ವಿತರಣೆ
ಪಡುಬಿದ್ರೆ, ಜೂ.27: ಎಲ್ಲೂರು ಅದಾನಿ ಯುಪಿಸಿಎಲ್ ಕಂಪನಿಯ ಅಂಗ ಸಂಸ್ಥೆಯಾದ ಅದಾನಿ ಫೌಂಡೇಷನ್ ವತಿಯಿಂದ ಸ್ಥಾವರದ ಸುತ್ತಮತ್ತ ಲಿನ ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿ ಗಳಿಗೆ ಶಿಕ್ಷಣ ಪರಿಕರಗಳನ್ನು ಇಂದು ವಿತರಿಸಲಾಯಿತು.
ಮೊದಲನೆ ಹಂತವಾಗಿ 36 ಶಾಲೆಗಳ ಒಟ್ಟು 3,242 ವಿದ್ಯಾರ್ಥಿಗಳಿಗೆ 30.41 ಲಕ್ಷ ರೂ. ವೌಲ್ಯದ ಅದಾನಿ ಶಿಕ್ಷಣ ಪರಿಕರಗಳಾದ ನೋಟ್ ಪುಸ್ತಕ ಗಳು, ಜಾಮಿಟ್ರಿ ಬಾಕ್ಸ್, ಬ್ಯಾಗ್‌ಗಳ ಜೊತೆಗೆ ಕೊಡೆಗಳನ್ನು ಆಯಾ ತರಗತಿ ಯ ವಿದ್ಯಾರ್ಥಿಗಳಿಗೆ ಅನುಗುಣವಾಗುವಂತೆ ಕಂಪನಿಯ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ ಆಯಾ ಶಾಲೆಗಳಿಗೆ ತೆರಳಿ ವಿತರಿಸಿದರು.
ಮುದರಂಗಡಿ ಸಂತ ಫ್ರಾನ್ಸೀಸ್ ಹಿರಿಯ ಪ್ರಾಥಮಿಕ ಶಾಲೆ, ಸರಕಾರಿ ಪ್ರೌಢ ಶಾಲೆ, ಎಲ್ಲೂರು ಎಸ್‌ವಿಸಿಎಸ್ ಹಿರಿಯ ಪ್ರಾಥಮಿಕ ಶಾಲೆ, ಕೆಮೆಂಡಲು ಹಿರಿಯ ಪ್ರಾಥಮಿಕ ಶಾಲೆ, ಪಣಿಯೂರಿನ ಶ್ರೀದುರ್ಗಾದೇವಿ ಹಿರಿಯ ಪ್ರಾಥಮಿಕ ಶಾಲೆ, ಬೆಳಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸರಕಾರಿ ಸಂಯುಕ್ತ ಪ್ರೌಢಶಾಲೆ, ಕುತ್ಯಾರು ಸರಕಾರಿ ಪ್ರಾಥಮಿಕ ಶಾಲೆ, ಪಡುಕಳತ್ತೂರು ಪ್ರೌಢ ಶಾಲೆ, ಅದಮಾರಿನ ಪೂರ್ಣ ಪ್ರಜ್ಞಾ ಪ್ರೌಢ ಶಾಲೆ, ಹಿಂದು ಹಿರಿಯ ಪ್ರಾಥಮಿಕ ಶಾಲೆ, ನಂದಿಕೂರು ಸರಕಾರಿ ಪ್ರಾಥಮಿಕ ಶಾಲೆ, ಕಂಚಿನಡ್ಕದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪಾದೆಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪಡುಬಿದ್ರಿ ಗ್ರಾಮ ವ್ಯಾಪ್ತಿಯ ಎಸ್‌ಬಿವಿಪಿ ಹಿರಿಯ ಪ್ರಾಥಮಿಕ ಶಾಲೆ, ಗಣಪತಿ ಪ್ರೌಢಶಾಲೆ, ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಸರಕಾರಿ ಪ್ರೌಢ ಶಾಲೆ, ಉರ್ದು ಹಿರಿಯ ಪ್ರಾಥಮಿಕ ಶಾಲೆ, ಎರ್ಮಾಳ್ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ತೆಂಕ ಸರಕಾರಿ ಸಂಯುಕ್ತ ಪ್ರೌಢ ಶಾಲೆ, ಸರಕಾರಿ ಪ್ರೌಢಶಾಲೆ, ಬಡಾ ಗ್ರಾಮದ ಸರಕಾರಿ ಪ್ರೌಢ ಶಾಲೆ, ಸರಸ್ವತಿ ವಿದ್ಯಾ ಮಂದಿರ ಹಿರಿಯ ಪ್ರಾಥಮಿಕ ಶಾಲೆ, ಮೂಳೂರು ಸಿಎಸ್‌ಐ ಸಂಯುಕ್ತ ಪ್ರೌಢ ಶಾಲೆ, ಯುಬಿಎಂಸಿ ಹಿರಿಯ ಪ್ರಾಥಮಿಕ ಶಾಲೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸರಕಾರಿ ಪ್ರೌಢ ಶಾಲೆ, ಕಾಪು ಪಡು ಪ್ರಾಥಮಿಕ ಶಾಲೆ, ಕಾಪು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಪೊಲಿಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸರಕಾರಿ ಪ್ರೌಢ ಶಾಲೆ, ಕೈಪುಂಜಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಣ ಪರಿಕರಗಳನ್ನು ವಿತರಿಸಲಾಯಿತು.
ಈ ಸಮಾರಂಭದಲ್ಲಿ ಯುಪಿಸಿಎಲ್ ಸಂಸ್ಥೆಯ ಅಸೋಸಿಯೇಟ್ ಜನರಲ್ ಮ್ಯಾನೇಜರ್ ಗಿರೀಶ್ ನಾವಡ, ಹಿರಿಯ ವ್ಯವಸ್ಥಾಪಕ ರವಿ ಆರ್.ಜೇರೆ, ಅದಾನಿ ಫೌಂಡೇಷನ್ ಸಂಸ್ಥೆಯ ವಿನೀತ್ ಅಂಚನ್, ಸುಕೇಶ್ ಸುವರ್ಣ, ಅನುದೀಪ್ ಪೂಜಾರಿ ಉಪಸ್ಥಿತರಿದ್ದರು.