ಭಾರತ ಜತೆಗಿನ ಮಾತುಕತೆ ರದ್ದುಪಡಿಸಿದ ಅಮೆರಿಕ

Update: 2018-06-28 07:00 GMT

ವಾಷಿಂಗ್ಟನ್, ಜೂ. 28: ಭಾರತ ಹಾಗೂ ಅಮೆರಿಕ ನಡುವೆ ಭಿನ್ನಾಭಿಪ್ರಾಯಗಳು ಬಲಗೊಳ್ಳುತ್ತಿರುವ ಬೆನ್ನಲ್ಲೇ, ಮುಂದಿನ ವಾರ ನಡೆಯಬೇಕಿದ್ದ ಬಹುನಿರೀಕ್ಷಿತ ದ್ವಿಪಕ್ಷೀಯ ಮಾತುಕತೆಯನ್ನು ಅಮೆರಿಕ ದಿಢೀರನೆ ರದ್ದುಪಡಿಸಿದೆ.

ಅಮೆರಿಕದ ರಕ್ಷಣಾ ಕಾರ್ಯದರ್ಶಿ ಹಾಗೂ ಭಾರತದ ರಕ್ಷಣಾ ಕಾರ್ಯದರ್ಶಿ ನಡುವಿನ ಮಾತುಕತೆ ಜು.6ರಂದು ವಾಷಿಂಗ್ಟನ್‌ನಲ್ಲಿ ನಿಗದಿಯಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಅದನ್ನು ಮುಂದೂಡಲಾಗಿದೆ ಎಂಬ ಬಗ್ಗೆ ಅಮೆರಿಕ ಅಧಿಕಾರಿಗಳು ಭಾರತಕ್ಕೆ ಮಾಹಿತಿ ನೀಡಿದ್ದಾರೆ.

ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೊಂಪೆಯೊ ಅವರು, ಸುಷ್ಮಾ ಸ್ವರಾಜ್ ಜತೆ ಮಾತುಕತೆ ನಡೆಸಿ, ಎರಡೂ ಕಡೆಯವರಿಗೆ ಅನುಕೂಲವಾಗುವ ಹೊಸ ದಿನಾಂಕವನ್ನು ಆದಷ್ಟು ಶೀಘ್ರವಾಗಿ ಭಾರತ ಅಥವಾ ಅಮೆರಿಕದಲ್ಲಿ ನಿಗದಿಪಡಿಸಿಸಲು ನಿರ್ಧರಿಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ರವೀಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ಉಭಯ ದೇಶಗಳ ನಡುವಿನ ಉನ್ನತ ಮಟ್ಟದ ಮಾತುಕತೆ ಮುಂದೂಡಿಕೆಯಾಗುತ್ತಿರುವುದು ಇದು ಎರಡನೇ ಬಾರಿ. ಈ ಮೊದಲು ಅಮೆರಿಕ ರಕ್ಷಣಾ ಕಾರ್ಯದರ್ಶಿ ರೆಕ್ಸ್ ಟಿಲ್ಲರ್‌ಸನ್ ಅವರನ್ನು ಟ್ರಂಪ್ ಪದಚ್ಯುತಗೊಳಿಸಿದ ಸಂದರ್ಭದಲ್ಲಿ ಕಳೆದ ಮಾರ್ಚ್‌ನಲ್ಲಿ ಮಾತುಕತೆ ರದ್ದಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News