ರಾಜ್ಯ ಸರಕಾರದಿಂದ ಕ್ರೀಡಾಪಟುಗಳಿಗೆ ಉತ್ತೇಜನ: ಉಪ ಮುಖ್ಯಮಂತ್ರಿ ಪರಮೇಶ್ವರ್

Update: 2018-06-28 12:36 GMT

ಬೆಂಗಳೂರು, ಜೂ. 28: ಹಿಮಾಚಲ ಪ್ರದೇಶದ ಸೋಲನ್‌ನಲ್ಲಿ ನಡೆದಿದ್ದ ನ್ಯಾಷನಲ್ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಆರು ಚಿನ್ನ, ಐದು ಬೆಳ್ಳಿ ಹಾಗೂ ಎರಡು ಕಂಚಿನ ಪದಕ ಪಡೆದ ರಾಜ್ಯದ ಕಿಕ್ ಬಾಕ್ಸಿಂಗ್ ತಂಡದ 12 ಮಕ್ಕಳನ್ನು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಭಿನಂದಿಸಿದರು.

ಗುರುವಾರ ಇಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಸ್ಪರ್ಧಾಳುಗಳನ್ನು ಕರೆಸಿಕೊಂಡು ಅಭಿನಂದಿಸಿದ ಪರಮೇಶ್ವರ್, ಇಂತಹ ಸಾಧನೆ ನಿಮ್ಮಿಂದ ಇನ್ನಷ್ಟು ಆಗಲಿ. ರಾಜ್ಯ ಸರಕಾರದಿಂದ ನಿಮಗೆ ಅಗತ್ಯ ಪ್ರೋತ್ಸಾಹ ದೊರೆಯಲಿದೆ ಎಂದು ಭರವಸೆ ನೀಡಿದರು.

ರಾಜ್ಯದ ಎಲ್ಲ ಭಾಗದ ಕ್ರೀಡಾಸಕ್ತರು, ಪಟುಗಳನ್ನು ಗುರುತಿಸಿ ಪ್ರೋತ್ಸಾಹ ನೀಡುವ ಕಾರ್ಯವನ್ನು ರಾಜ್ಯ ಸರಕಾರ ಮಾಡಲಿದೆ. ಮುಂದಿನ ದಿನಗಳಲ್ಲಿ ಕ್ರೀಡೆಗೆ ಇನ್ನಷ್ಟು ಉತ್ತೇಜನ ಸಿಗಲಿದೆ ಎಂದು ಪರಮೇಶ್ವರ್ ಹೇಳಿದರು.

ರಾಜ್ಯ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಹೆಸರು ಮಾಡುತ್ತಿದ್ದು, ಮುಂಬರುವ ದಿನಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಬಳಕೆ ಹಾಗೂ ವಿಶೇಷ ಉತ್ತೇಜನ ನೀಡುತ್ತೇವೆ. ದೇಶದಲ್ಲಿಯೇ ಮಾದರಿ ಎನಿಸುವ ಮೂಲಸೌಕರ್ಯ ಒದಗಿಸಿ ಪ್ರತಿಭೆಗಳನ್ನು ಹೊರತರುವ ಕಾರ್ಯ ಮಾಡಲಿದ್ದೇವೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News