×
Ad

ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ‘ಚೀನಾ’ ಆಸಕ್ತಿ: ಮುಖ್ಯಮಂತ್ರಿ ಕುಮಾರಸ್ವಾಮಿ

Update: 2018-06-28 21:02 IST

ಬೆಂಗಳೂರು, ಜೂ. 28: ಸ್ಮಾರ್ಟ್‌ಸಿಟಿ ಮತ್ತು ಬೆಂಗಳೂರು ಸಾರಿಗೆ ವ್ಯವಸ್ಥೆ ಸೇರಿದಂತೆ ಇನ್ನಿತರ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆ ಮಾಡಲು ಚೀನಾ ಆಸಕ್ತಿ ಹೊಂದಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ.

ಗುರುವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಚೀನಾ ನಿಯೋಗದೊಂದಿಗೆ ಸುಧೀರ್ಘ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಚೀನಾ ನಿಯೋಗದಿಂದ ಸುಮಾರು 16 ಮಂದಿ ಪ್ರತಿನಿಧಿಗಳು ಆಗಮಿಸಿದ್ದು, ಅಭಿವೃದ್ದಿಗೆ ಪೂರಕವಾದ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆ ಕುರಿತು ಚರ್ಚಿಸಲಾಗಿದೆ ಎಂದರು.

ನಾಳೆಯಿಂದ ಮೂರು ದಿನಗಳ ಕಾಲ ರಾಜ್ಯದ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಚೀನಾ ನಿಯೋಗ ಸಮಾಲೋಚನೆ ನಡೆಸಲಿದೆ. ಕರ್ನಾಟಕ ಹಾಗೂ ಚೀನಾ ಸರಕಾರದ ನಡುವೆ ಒಡಂಬಡಿಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಇದು ಆರಂಭಿಕ ಸಭೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News