×
Ad

ರವಿ ಬೆಳಗೆರೆ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

Update: 2018-06-28 21:21 IST

ಬೆಂಗಳೂರು, ಜೂ.28: ಸಹೋದ್ಯೋಗಿ ಹತ್ಯೆಗೆ ಸುಪಾರಿ ಕೊಟ್ಟ ಪ್ರಕರಣದಲ್ಲಿ ಪತ್ರಕರ್ತ ರವಿ ಬೆಳಗೆರೆಗೆ ಅಧೀನ ನ್ಯಾಯಾಲಯ ನೀಡಿರುವ ಜಾಮೀನು ರದ್ದುಕೋರಿ ತನಿಖಾಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ರವಿ ಬೆಳಗೆರೆ ಜಾಮೀನು ರದ್ದುಕೋರಿ ತನಿಖಾಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ನಾ ಅವರಿದ್ದ ನ್ಯಾಯಪೀಠ, ಗುರುವಾರ ಈ ಆದೇಶ ನೀಡಿತು.

ರವಿ ಬೆಳಗೆರೆ ಪರ ವಾದಿಸಿದ ವಕೀಲರು, ಸಹೋದ್ಯೋಗಿ ಹತ್ಯೆ ಪ್ರಕರಣದಲ್ಲಿ ಈಗಾಗಲೇ ಪೊಲೀಸರು ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದಾರೆ. ಅಧೀನ ನ್ಯಾಯಾಲಯ ವಿಧಿಸಿರುವ ಯಾವುದೇ ಷರತ್ತುಗಳನ್ನು ಉಲ್ಲಂಘಿಸಿಲ್ಲ ಎಂದು ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ತನಿಖಾಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.

ಆರೋಪಿಯು ಪ್ರಭಾವಿಯಾಗಿದ್ದು, ಸಾಕ್ಷಿಗಳಿಗೆ ಬೆದರಿಕೆ ಒಡ್ಡುವ ಸಾಧ್ಯತೆಯಿದೆ. ಸಾಕ್ಷಾಧಾರಗಳನ್ನು ನಾಶ ಪಡಿಸುವ ಸಾಧ್ಯತೆ ಇದೆ ಎಂಬ ಪ್ರಾಸಿಕ್ಯೂಷನ್ ಪರ ಮನವಿಯನ್ನು ಅಧೀನ ನ್ಯಾಯಾಲಯ ಗಣನೆಗೆ ತೆಗೆದುಕೊಂಡಿಲ್ಲ. ತನಿಖಾಧಿಕಾರಿಗಳು ಆರೋಪಿಯ ವಿರುದ್ಧದ ಆರೋಪವನ್ನು ಪುಷ್ಟೀಕರಿಸುವುದಕ್ಕೆ ಅಗತ್ಯವಿರುವ ಸಾಕ್ಷಾಧಾರಗಳನ್ನು ಸಲ್ಲಿಸಿದ್ದರೂ ಅವುಗಳನ್ನು ಪುರಸ್ಕರಿಸಿಲ್ಲ. ಹೀಗಾಗಿ ಅಧೀನ ನ್ಯಾಯಾಲಯ ಮಂಜೂರು ಮಾಡಿರುವ ಜಾಮೀನು ರದ್ದುಪಡಿಸುವಂತೆ ಅರ್ಜಿಯಲ್ಲಿ ಕೋರಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News