ಬಿಬಿಎಂಪಿ ಆಯುಕ್ತ ವರ್ಗಾವಣೆ
Update: 2018-06-28 21:33 IST
ಬೆಂಗಳೂರು, ಜೂ.28: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತರಾಗಿದ್ದ ಎಂ.ಮಹೇಶ್ವರ ರಾವ್ ಅವರನ್ನು ವರ್ಗಾವಣೆ ಮಾಡಿ, ಆಯುಕ್ತರಾಗಿ ಮಂಜುನಾಥ್ ಪ್ರಸಾದ್ ಅವರನ್ನು ಮರು ನೇಮಕ ಮಾಡಲಾಗಿದೆ.
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಂ.ಮಹೇಶ್ವರ್ ರಾವ್ ಅವರನ್ನು ಬಿಬಿಎಂಪಿ ಆಯುಕ್ತರಾಗಿ ನೇಮಿಸಲಾಗಿತ್ತು. ಇದೀಗ, ಅವರನ್ನು ವರ್ಗಾವಣೆ ಮಾಡಿ, ಕೃಷಿ ಹಾಗೂ ರೇಷ್ಮೆ ಇಲಾಖೆ ಕಾರ್ಯದರ್ಶಿಯನ್ನಾಗಿ ನೇಮಿಸಿ ಅಧಿಸೂಚನೆ ಹೊರಡಿಸಲಾಗಿದೆ.