×
Ad

ಕಾರು ಢಿಕ್ಕಿ: ಬೈಕ್ ಸವಾರನಿಗೆ ಗಾಯ

Update: 2018-06-28 22:13 IST

ಮಂಗಳೂರು, ಜೂ.28: ನಗರದ ಹರಿಪದವು ದುರ್ಗಾ ಪರಮೇಶ್ವರಿ ದೇವಸ್ಥಾನ ದ್ವಾರದ ಸಮೀಪ ಚಲಿಸುತ್ತಿದ್ದ ಕಾರಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

ಗಾಯಗೊಂಡ ಬೈಕ್ ಸವಾರನನ್ನು ಮೃದುಲ್ ವೇಣುಗೋಪಾಲ್ ಎಂದು ಗುರುತಿಸಲಾಗಿದೆ. ಶ್ರೀಶ್ತ ಶೆಟ್ಟಿ ಎಂಬವರು ಬೆಳಗ್ಗೆ 8:40ಕ್ಕೆ ತನ್ನ ಕಾರಿನಲ್ಲಿ ಮಗಳನ್ನು ಖಾಸಗಿ ಆಸ್ಪತ್ರೆಯಿಂದ ಪ್ರಿಯದರ್ಶಿನಿ ಶಾಲೆಯ ಕಡೆಗೆ ಬಿಡಲು ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಹರಿಪದವು ದುರ್ಗಾ ಪರಮೇಶ್ವರಿ ದೇವಸ್ಥಾನದ ದ್ವಾರ ಸಮೀಪ ಶ್ರೀಶ್ತ ಶೆಟ್ಟಿ ಅವರ ಕಾರು ತಲುಪುತ್ತಿದ್ದಂತೆ ವಿರುದ್ಧ ದಿಕ್ಕಿನಲ್ಲಿ ದುಡುಕುತನ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿಕೊಂಡು ಬಂದ ಬೈಕ್ ಕಾರಿನ ಮುಂಭಾಗಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಬೈಕ್ ಸಮೇತ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದಾನೆ. ಬಳಿಕ ಗಾಯಾಳುವನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಪೂರ್ವ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News