ಕಾರವಾರ: ಭೀಕರ ರಸ್ತೆ ಅಪಘಾತಕ್ಕೆ ಮೂವರು ಬಲಿ
Update: 2018-06-29 18:18 IST
ಕಾರವಾರ, ಜೂ.29: ಹೆದ್ದಾರಿ ಸಮೀಪದ ವಿದ್ಯುತ್ ಕಂಬಕ್ಕೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರವಾರ ತಾಲೂಕಿನ ಮಾಜಾಳಿಯಲ್ಲಿ ಸಂಭವಿಸಿದೆ.
ಶಂಭು(28), ನಾಗೇಂದ್ರ (33) ಹಾಗು ಶ್ರೀನಿವಾಸ(40) ಮೃತರು ಎಂದು ಗುರುತಿಸಲಾಗಿದ್ದು, ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಗೋವಾದಿಂದ ಕಾರವಾರಕ್ಕೆ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.