ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಆದ್ಯತೆ ಮೇಲೆ ಪರಿಗಣಿಸಿ: ಸಂಸದ ಧ್ರುವನಾರಾಯಣ
ಮೈಸೂರು,ಜೂ.29: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಮಾಹಿತಿ ಪಡೆದು, ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪರಿಗಣಿಸಿ, ಆದ್ಯತೆ ಮೇಲೆ ನಿರ್ವಹಿಸಲು ಸಂಸದ ಧ್ರುವನಾರಾಯಣ ಸೂಚಿಸಿದ್ದಾರೆ.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಂಸದ ಧ್ರುವನಾರಾಯಣ ನೇತೃತ್ವದಲ್ಲಿ ಶುಕ್ರವಾರ ನಡೆದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಹಳ್ಳಿಗಾಡಿನಲ್ಲಿರುವ ಮೂಲ ಸೌಕರ್ಯಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ವಾಸಿಸುವ ಕಾಲೋನಿ ಹಾಗೂ ಹಾಡಿಗಳಿಗೆ ತೆರಳಲು ಯೋಗ್ಯ ರಸ್ತೆಗಳು ಇಲ್ಲ, ಆದ್ದರಿಂದ ರಸ್ತೆ ನಿರ್ಮಾಣ ಮಾಡಬೇಕು ಹತ್ತಿರದಲ್ಲಿ ಶಾಲೆ-ಅಂಗನವಾಡಿಗಳನ್ನು ತೆರೆಯಬೇಕೆಂದು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳು ಮತ್ತು ಯೋಜನೆಗಳ ಬಗ್ಗೆ ಚರ್ಚೆ ನಡೆಯಿತು.
ಸಭೆಯಲ್ಲಿ ಶಾಸಕರುಗಳಾದ ಹೆಚ್ ವಿಶ್ವನಾಥ್, ಅನಿಲ್ ಚಿಕ್ಕಮಾದು, ಡಾ.ಯತೀಂದ್ರ ಸಿದ್ದರಾಮಯ್ಯ, ಹರ್ಷ ವರ್ಧನ್, ಅಶ್ವಿನ್ ಕುಮಾರ್ ಜಿ.ಪಂ ಅಧ್ಯಕ್ಷೆ ನಯೀಮಾ ಸುಲ್ತಾನ್ ನಜೀರ್ ಅಹ್ಮದ್, ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಮತ್ತು ಜಿ.ಪಂ ಸಿಇಓ ಶಿವಶಂಕರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.