ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2018-06-29 15:11 GMT

ಬೆಂಗಳೂರು, ಜೂ.29: ರಾಜ್ಯ ಸರಕಾರವು ನಾಲ್ಕು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ರಾಜ್‌ಕುಮಾರ್ ಖತ್ರಿಯನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದ್ದು, ಮುಂದಿನ ಆದೇಶದವರೆಗೆ ಉನ್ನತ ಶಿಕ್ಷಣ ಇಲಾಖೆಯ ಪ್ರಭಾರ ವಹಿಸಲಾಗಿದೆ.

ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್‌ಗುಪ್ತರನ್ನು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದ್ದು, ಮುಂದಿನ ಆದೇಶದವರೆಗೆ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಪ್ರಭಾರ ವಹಿಸಲಾಗಿದೆ.

ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ವಿ.ಯಶವಂತರನ್ನು ಅಬಕಾರಿ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದ್ದು, ಮುಂದಿನ ಆದೇಶದವರೆಗೆ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯ ಪ್ರಭಾರ ವಹಿಸಲಾಗಿದೆ.

ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಕೆ.ಬಿ.ಶಿವಕುಮಾರ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಉಪ ಕಾರ್ಯದರ್ಶಿಯನ್ನಾಗಿ ನಿಯುಕ್ತಿ ಮಾಡಿ ಸರಕಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News