×
Ad

ನೋಟ್ ರದ್ದತಿ ನಂತರ ನಡೆದ ಅವ್ಯವಹಾರ ಆರೋಪ : ಸಚಿವ ಡಿಕೆಶಿ ಆಪ್ತರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Update: 2018-06-29 22:14 IST

ನೋಟ್ ರದ್ದತಿ ನಂತರ ನಡೆದ ಅವ್ಯವಹಾರ ಆರೋಪ : ಸಚಿವ ಡಿಕೆಶಿ ಆಪ್ತರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಬೆಂಗಳೂರು, ಜೂ.29: ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಆಪ್ತರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

ನೋಟ್ ರದ್ದತಿ ನಂತರ ನಡೆದಿದ್ದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಿಂದ ಡಿಕೆಶಿ ಅವರ ಆರು ಮಂದಿ ಆಪ್ತರು ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಪುಷ್ಪಾಂಜಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ನೀಡಿದ್ದಾರೆ.

ಸಂಸದ ಡಿ.ಕೆ. ಸುರೇಶ್ ಪಿಎ ಪದ್ಮನಾಭಯ್ಯ, ಡಿಕೆಶಿ ಮಾಜಿ ಪಿಎ ಶೇಷಗಿರಿ, ಪದ್ಮರೇಖಾ , ಶಿವಾನಂದ, ನಂಜಪ್ಪ, ತಿಮ್ಮಯ್ಯ ಸೇರಿ ಆರು ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿದೆ.

ರಾಮನಗರದ ಕಾರ್ಪೊರೇಷನ್ ಬ್ಯಾಂಕ್‌ನಲ್ಲಿ 10 ಲಕ್ಷ ಮೌಲ್ಯದ ಹಳೆಯ 500 ಮತ್ತು ಸಾವಿರ ಮುಖಬೆಲೆಯ ನೋಟುಗಳನ್ನು ಹೊಸ ನೋಟುಗಳಿಗೆ ಬದಲಾಯಿಸಿದ ಪ್ರಕರಣದಲ್ಲಿ ಡಿಕೆಶಿ ಆಪ್ತರು ಆರೋಪಿಗಳಾಗಿದ್ದರು. ಇತ್ತೀಚೆಗಷ್ಟೇ ಸಿಬಿಐ ಅಧಿಕಾರಿಗಳು ಡಿಕೆಶಿ ಆಪ್ತರ ಮನೆಗಳ ಮೇಲೆ ದಾಳಿ ನಡೆಸಿದ್ದರು. ಪ್ರಕರಣದ ತನಿಖೆ ತೀವ್ರಗೊಳ್ಳುತ್ತಿದ್ದಂತೆ ಆರು ಜನ ಆರೋಪಿಗಳು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಈಗ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿರುವುದರಿಂದ ಡಿಕೆ ಶಿವಕುಮಾರ್ ಆಪ್ತರಿಗೆ ಬಂಧನ ಭೀತಿ ಎದುರಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News