ಕಬಡ್ಡಿ ಮಾಸ್ಟರ್ಸ್: ಭಾರತ ಫೈನಲ್‌ಗೆ

Update: 2018-06-29 17:07 GMT

ದುಬೈ, ಜೂ.29: ಕಬಡ್ಡಿ ಮಾಸ್ಟರ್ಸ್ ಟೂರ್ನಿಯ ಸೆಮಿ ಫೈನಲ್‌ನಲ್ಲಿ ಹಾಲಿ ವಿಶ್ವ ಚಾಂಪಿಯನ್ ಭಾರತ ತಂಡ ದಕ್ಷಿಣ ಕೊರಿಯಾವನ್ನು ಮಣಿಸಿ ಫೈನಲ್‌ಗೆ ತಲುಪಿದೆ.

ಶುಕ್ರವಾರ ಇಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡ ಕೊರಿಯಾವನ್ನು 36-20 ಅಂಕಗಳ ಅಂತರದಿಂದ ಸೋಲಿಸಿತು. ಫೈನಲ್‌ನಲ್ಲಿ ಇರಾನ್ ತಂಡವನ್ನು ಎದುರಿಸಲಿದೆ. ಇರಾನ್ ಮತ್ತೊಂದು ಸೆಮಿ ಫೈನಲ್‌ನಲ್ಲಿ ಪಾಕಿಸ್ತಾನವನ್ನು 40-21 ಅಂಕಗಳಿಂದ ಸೋಲಿಸಿದೆ.

ಭಾರತ-ಇರಾನ್ ಎರಡೂ ತಂಡಗಳು ಭರ್ಜರಿ ಫಾರ್ಮ್‌ನಲ್ಲಿದ್ದು ಫೈನಲ್ ಪಂದ್ಯ ಕುತೂಹಲ ಕೆರಳಿಸಿದೆ.

 ಕನ್ನಡಿಗ ರಿಶಾಂಕ್ ದೇವಾಡಿಗ ರೈಡರ್‌ಗಳ ಪೈಕಿ ಗರಿಷ್ಠ ಸ್ಕೋರ್ ಗಳಿಸಿದ್ದಾರೆ. ಗಿರೀಶ್ ಉತ್ತಮ ಡಿಫೆಂಡರ್ ಆಗಿದ್ದು 9 ಅಂಕ ಗಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News