ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯಾಗಿ ವಿಜಯ್ ಭಾಸ್ಕರ್ ನೇಮಕ

Update: 2018-06-30 12:47 GMT

ಬೆಂಗಳೂರು, ಜೂ. 30: ಸರಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಟಿ.ಎಂ.ವಿಜಯಭಾಸ್ಕರ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಶನಿವಾರ ಆದೇಶ ಹೊರಡಿಸಿದೆ.

ಸರಕಾರದ ಮುಖ್ಯ ಕಾರ್ಯದರ್ಶಿಯಾಗಿದ್ದ ಐಎಎಸ್ ಅಧಿಕಾರಿ ಕೆ.ರತ್ನಪ್ರಭಾ ಅವರು ಸೇವೆಯಿಂದ ಇಂದು (ಜೂ.30) ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ, 1983ನೆ ಬ್ಯಾಚಿನ ಐಎಎಸ್ ಅಧಿಕಾರಿ ವಿಜಯಭಾಸ್ಕರ್‌ರನ್ನು ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿ ರಾಜ್ಯ ಸರಕಾರ ಆದೇಶಿಸಿದೆ.

ಕೆ.ರತ್ನಪ್ರಭಾ ಅವರ ಸೇವಾವಧಿಯನ್ನು ಸೆ.30ರ ವರೆಗೆ ವಿಸ್ತರಣೆ ಮಾಡಲು ರಾಜ್ಯ ಸರಕಾರ ಕೇಂದ್ರ ಸರಕಾರದ ಅನುಮತಿ ಕೋರಿತ್ತು. ಆದರೆ, ಕೇಂದ್ರ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ನೂತನ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ವಿಜಯಭಾಸ್ಕರ್ ಅವರನ್ನು ನೇಮಕ ಮಾಡಿದೆ.

ಅಧಿಕಾರ ಸ್ವೀಕಾರ: ನಿಕಟಪೂರ್ವ ಸಿಎಸ್ ಆಗಿದ್ದ ಕೆ.ರತ್ನಪ್ರಭಾ ಅವರಿಂದ ನೂತನ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಅಧಿಕಾರ ವಹಿಸಿಕೊಂಡಿದ್ದಾರೆ. ಇವರ ಸೇವಾವಧಿ 2020ರ ವರೆಗೂ ಇದೆ ಎಂದು ಗೊತ್ತಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News