ಎನ್.ಆರ್.ರಮೇಶ್ ವಿರುದ್ಧ ಮಾನನಷ್ಟ ಮೊಕದ್ದಮೆ: ಶಾಸಕ ಭೈರತಿ ಬಸವರಾಜ್

Update: 2018-06-30 13:39 GMT

ಬೆಂಗಳೂರು, ಜೂ.30: ನೋಟುಗಳ ಅಮಾನ್ಯೀಕರಣ ಸಂದರ್ಭದಲ್ಲಿ ಬೆಂಗಳೂರು ಓನ್ ಕೇಂದ್ರಗಳಲ್ಲಿ ನೂರಾರು ಕೋಟಿ ರೂ.ಹಳೆ ನೋಟುಗಳನ್ನು ಬದಲಾಯಿಸಿಕೊಂಡಿರುವುದಾಗಿ ನನ್ನ ವಿರುದ್ಧ ಆರೋಪ ಮಾಡಿರುವ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡುವುದಾಗಿ ಕಾಂಗ್ರೆಸ್ ಶಾಸಕ ಭೈರತಿ ಬಸವರಾಜ್ ಎಚ್ಚರಿಕೆ ನೀಡಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್.ಆರ್. ರಮೇಶ್ ಒಬ್ಬ ಮಾನಸಿಕ ಅಸ್ವಸ್ಥ. ಆತನನ್ನು ನಿಮ್ಹಾನ್ಸ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಬೇಕು. ಹತಾಶ ಭಾವನೆಯಿಂದ ನನ್ನ ವಿರುದ್ಧ ಈ ರೀತಿ ಆರೋಪ ಮಾಡಿದ್ದಾನೆ ಎಂದು ಏಕವಚನದಲ್ಲೇ ಕಿಡಿಗಾರಿದರು.

ಕಳೆದ ಬಾರಿಯೂ ಇದೇ ರೀತಿ ಆರೋಪ ಮಾಡಿದ್ದ. ಆತನ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲು ನಿರ್ಧರಿಸಿದ್ದೇನೆ. ನನ್ನ ವಿರುದ್ಧ ಆತ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು. ಬೆಂಗಳೂರು ಒನ್ ಕೇಂದ್ರದಲ್ಲಿ ನಾನು ಯಾವುದೇ ರೀತಿಯಲ್ಲಿ ನೋಟುಗಳನ್ನು ಬದಲಾಯಿಸಿಕೊಂಡಿಲ್ಲ. ಚುನಾವಣೆಗಾಗಿ ಸಾಲ ಮಾಡಿದ್ದೇನೆ, ಜಮೀನು ಮಾರಿದ್ದೇನೆ ಎಂದು ಭೈರತಿ ಬಸವರಾಜ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News