ಗಾಂಜಾ ಮಾರಾಟ: ವ್ಯಕ್ತಿಯ ಬಂಧನ
Update: 2018-07-01 18:33 IST
ಬೆಂಗಳೂರು, ಜು.1: ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಿ 1.2 ಕೆ.ಜಿ ಗಾಂಜಾ ವಶಕ್ಕೆ ಪಡೆಯುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ನಗರದ ಮಹದೇವಪುರ ರೈಲು ನಿಲ್ದಾಣದ ವ್ಯಾಪ್ತಿಯಲ್ಲಿ ಗಾಂಜಾವನ್ನಿಟ್ಟುಕೊಂಡು ಮಾರಾಟ ಮಾಡಲು ಮುಂದಾಗಿದ್ದ ಮುಹಮದ್ ಫಾರೂಕ್(38)ಎಂಬಾತನನ್ನು ಸಿಸಿಬಿ ಬಂಧಿಸಿದೆ.
ಆರೋಪಿಯನ್ನು ವಶಕ್ಕೆ ಪಡೆದು, 1 ಕೆ.ಜಿ. 200 ಗ್ರಾಂ ತೂಕದ ಗಾಂಜಾ, ಮೊಬೈಲ್ ಹಾಗೂ ನಗದು ವಶಕ್ಕೆ ಪಡೆಯಲಾಗಿದೆ. ಬಂಧಿತ ಫಾರೂಕ್, ವ್ಯವಸ್ಥಿತವಾಗಿ ಗಾಂಜಾ ಖರೀದಿ ಮಾಡಿಕೊಂಡು ಬಂದು ತನ್ನ ವಶದಲ್ಲಿಟ್ಟುಕೊಂಡು ಪರಿಚಿತ ಗಿರಾಕಿಗಳಿಗೆ ಪ್ಯಾಕೇಟುಗಳನ್ನಾಗಿ ಮಾಡಿಕೊಂಡು, ಮಾರಾಟ ಮಾಡಿ ಅಕ್ರಮವಾಗಿ ಹಣ ಸಂಪಾದನೆ ಮಾಡುತ್ತಿದ್ದ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ಬಂಧಿತ ಆರೋಪಿ ವಿರುದ್ಧ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದ್ದು, ತನಿಖೆ ಮುಂದುವರೆಸಲಾಗಿದೆ.