ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಬಾಲಕ: ಆರೋಪ

Update: 2018-07-01 13:54 GMT

ಹರಿಹರ,ಜು.01: ಬಾಲಕನೊಬ್ಬ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾದ ಘಟನೆ ತಾಲೂಕಿನ ಮಲೆಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. 

ಮಲೆಬೆನ್ನೂರಿನಲ್ಲಿ 8 ವರ್ಷದ ಅಪ್ರಾಪ್ತೆ ಮೇಲೆ 16 ವರ್ಷದ ಬಾಲಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಬಾಲಾಪರಾಧಿಯನ್ನು ಮಲೆಬೆನ್ನೂರು ಪೊಲೀಸರು ವಶಕ್ಕೆ ಪಡೆದು, ದಾವಣಗೆರೆ ಬಾಲ ಮಂದಿರದ ವಶಕ್ಕೆ ಒಪ್ಪಿಸಿದ್ದಾರೆ ಎನ್ನಲಾಗಿದೆ. ಮಲೆಬೆನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯ ಮಕ್ಕಳ ಆಯೋಗದ ಸದಸ್ಯ ರೂಪಾ ನಾಯ್ಕ ಅವರಿಗೂ ಮಲೆಬೆನ್ನೂರು ಪ್ರಕರಣದ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ಮಲೆಬೆನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಲಾಪರಾಧಿಯನ್ನು ಬಾಲ ಮಂದಿರದ ವಶಕ್ಕೆ ಒಪ್ಪಿಸಿರುವುದಾಗಿ ಮಾಹಿತಿ ನೀಡಿದ್ದಾರೆಂದು ಹೇಳಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News