ಉಡುಪಿ: ಜು.2ರಂದು ಕೇಂದ್ರ ಯೋಜನೆಗಳ ಪ್ರಗತಿ ಪರಿಶೀಲನೆ
Update: 2018-07-01 19:32 IST
ಉಡುಪಿ, ಜು.1: ವಿವಿಧ ಕೇಂದ್ರ ಪುರಸ್ಕೃತ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಟಾನದ ಬಗ್ಗೆ ಆಗಿರುವ ಪ್ರಗತಿ ಪರಿಶೀಲನೆ ನಡೆಸುವ ಉಡುಪಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ)ಯ ತ್ರೈಮಾಸಿಕ ಸಭೆಯು ಜು.2ರಂದು ಸೋಮವಾರ ಬೆಳಗ್ಗೆ 10:30ಕ್ಕೆ ಮಣಿಪಾಲದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅಧ್ಯಕ್ಷತೆಯಲ್ಲಿ ಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.