ಮಂಗಳೂರು; ರಾಮಕೃಷ್ಣ ಮಿಷನ್‌ನ 38ನೇ ವಾರದ ಶ್ರಮದಾನ
Update: 2018-07-01 19:48 IST
ಮಂಗಳೂರು, ಜು.1: ರಾಮಕೃಷ್ಣ ಮಿಷನ್‌ನ ಸ್ವಚ್ಛ ಮಂಗಳೂರು ಅಭಿಯಾನದ 38ನೇ ಸ್ವಚ್ಛತಾ ಶ್ರಮದಾನವು ನಗರದ ಕುಂಟಿಕಾನದ ಮೇಲ್ಸೇತುವೆಯ ಕೆಳಭಾಗ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ರವಿವಾರ ನಡೆಯಿತು.
ಸ್ವಾಮಿ ಜಿತಕಾಮಾನಂದಜಿ ನೇತೃತ್ವದಲ್ಲಿ ಕೆನರಾ ಬಿಲ್ಡರ್ಸ್ ಅಸೋಸಿಯೇಶನ್‌ನ ಅಧ್ಯಕ್ಷ ಡಾ. ಮಂಜುನಾಥ ರೇವಣ್ಕರ್, ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್‌ನ ಅಧ್ಯಕ್ಷ ಸಂತೋಷ ಶೇಟ್ ಅಭಿಯಾನಕ್ಕೆ ಹಸಿರು ನಿಶಾನೆ ತೋರಿದರು. ಈ ಸಂದರ್ಭ ರೊಟೇರಿಯನ್ ಇಲಿಯಾಸ್ ಸಾಂತೋಸ್, ಉಮಾಕಾಂತ ಸುವರ್ಣ, ಮೋಹನ್ ಕೊಟ್ಟಾರಿ, ಪ್ರವೀಣ ರವೀಂದ್ರನ್ ಮತ್ತಿತರರು ಉಪಸ್ಥಿತರಿದ್ದರು.
ಸ್ವಚ್ಛ ಭಾರತ್ ಮಿಷನ್ ಜಿಲ್ಲಾ ಸಂಯೋಜಕಿ ಮಂಜುಳಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಮಾನಾಥ್ ಕೋಟೆಕಾರ್ ಸ್ವಾಗತಿಸಿದರು. ಸ್ವಾಮಿ ಏಕಗಮ್ಯಾನಂದಜಿ ವಂದಿಸಿದರು. ನವೀನ್ ಕೊಣಾಜೆ ಕಾರ್ಯಕ್ರಮ ನಿರೂಪಿಸಿದರು.