ಸಮಸ್ಯೆಯನ್ನು ಇತರರೊಂದಿಗೆ ಹಂಚಿಕೊಳ್ಳಿ: ಡಾ.ಭಂಡಾರಿ
ಉಡುಪಿ, ಜು.1: ಸಮಸ್ಯೆಯನ್ನು ಇತರರೊಂದಿಗೆ ಹಂಚಿಕೊಂಡಾಗ ಅರ್ಧ ಸಮಸ್ಯೆ ಪರಿಹಾರವಾಗುತ್ತದೆ. ವಿದ್ಯಾರ್ಥಿಗಳು ಮಾನಸಿಕ ಒತ್ತಡವನ್ನು ನಿಬಾ ಯಿಸಿ ಆತ್ಮವಿಶ್ವಾಸವನ್ನು ಮೂಡಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದು ಮನೋ ತಜ್ಞ ಡಾ.ಪಿ.ವಿ.ಭಂಡಾರಿ ತಿಳಿಸಿದ್ದಾರೆ.
ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ 2018-19ನೆ ಸಾಲಿನ ಪ್ರಥಮ ಪದವಿ ವಿದ್ಯಾರ್ಥಿಗಳ ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡುತಿದ್ದರು.
ಕಾರ್ಯಕ್ರಮವನ್ನು ಉಡುಪಿ ನಗರಸಭೆ ಸದಸ್ಯ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಯಶ್‌ಪಾಲ್ ಸುವರ್ಣ ಉದ್ಘಾಟಿಸಿದರು. ಮುಖ್ಯ ಅತಿಥಿ ಯಾಗಿ ಲಯನ್ಸ್ ಎನ್.ಎಂ.ಹೆಗ್ಡೆ ಮಾತನಾಡಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಎಸ್. ವಹಿಸಿದ್ದರು.
ಪರ್ಕಳ ಲಯನ್ಸ್ ಅಧ್ಯಕ್ಷ ಹರೀಶ್ ಸುವರ್ಣ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಕೃಷ್ಣ ಭಟ್, ವಿಜ್ಞಾನ ವಿಬಾಗದ ಮುಖ್ಯಸ್ಥ ರಾಮಚಂದ್ರ ಅಡಿಗ, ಕಲಾ ವಿಭಾಗದ ಮುಖ್ಯಸ್ಥ ಡಾ.ರವಿರಾಜ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಾಮರಾಯ ಆಚಾರ್ಯ ಸ್ವಾಗತಿಸಿದರು. ಡಾ. ರೋಶನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ನಿತ್ಯಾನಂದ ಎನ್. ವಂದಿಸಿದರು.