×
Ad

​ಅರಿವು ಸಾಲ ಯೋಜನೆಗೆ ಅರ್ಜಿ ಆಹ್ವಾನ

Update: 2018-07-02 18:56 IST

ಉಡುಪಿ, ಜು.2: 2018-19ನೇ ಸಾಲಿಗೆ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಕಬ್ಬಲಿಗ, ಕೋಲಿ, ಗಂಗಾಮತ, ಮೊಗವೀರ, ಖಾರ್ವಿ/ಕೊಂಕಣ ಖಾರ್ವಿ ಮತ್ತು ಇದರ ಉಪಜಾತಿಗಳಿಗೆ ಸೇರಿದ (ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ) ವಿದ್ಯಾರ್ಥಿಗಳ ವ್ಯಾಸಂಗಕ್ಕೆ, ಕೋರ್ಸ್‌ನ ವಾಸ್ತವಿಕ ವೆಚ್ಚ ಅಥವಾ ವಾರ್ಷಿಕ ಗರಿಷ್ಠ ಒಂದು ಲಕ್ಷ ರೂ.ನಂತೆ ಶೇ.2ರ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುತಿದ್ದು, ಇದಕ್ಕಾಗಿ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಸಿಇಟಿ ಮೂಲಕ ಅಥವಾ ಮೆರಿಟ್ ಆಧಾರದ ಮೇಲೆ ಸೀಟು ಪಡೆದು ವಿವಿಧ ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಕುಟುಂಬದ ವಾರ್ಷಿಕ ವರಮಾನ 3.50ಲಕ್ಷ ರೂ.ಗಳ ಮಿತಿಯಲ್ಲಿರಬೇಕು. ಅರ್ಜಿಯನ್ನು ಅವರ ಜಿಲ್ಲೆಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಿಂದ ಪಡೆದು, ಸ್ವ- ವಿವರಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಜು.31ರೊಳಗೆ ಸಲ್ಲಿಸಬೇಕು.

ಹೆಚ್ಚಿನಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಉಡುಪಿ ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News