ಬಂಡವಾಳ ಹೂಡಿಕೆಯಲ್ಲಿ ರಾಜ್ಯ ಪ್ರಥಮ: ರಾಜ್ಯಪಾಲ

Update: 2018-07-02 15:17 GMT

ಬೆಂಗಳೂರು, ಜು.2: ಉದ್ದೇಶಿತ ಬಂಡವಾಳ ಹೂಡಿಕೆಯಲ್ಲಿ ರಾಜ್ಯವು ಪ್ರಥಮ ಸ್ಥಾನದಲ್ಲಿದೆ. ಬಂಡವಾಳವನ್ನು ಆಕರ್ಷಿಸುವ ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿಯೊಂದಿಗೆ ರಾಜ್ಯ ಕೈಗಾರಿಕಾ ನೀತಿಯನ್ನು ಸರಕಾರ ಅನುಷ್ಠಾನಗೊಳಿಸುತ್ತಿದೆ ಎಂದು ರಾಜ್ಯಪಾಲ ವಜುಭಾಯಿ ವಾಲಾ ಮೆಚ್ಚುಗೆ ವ್ಯಕ್ತಪಡಿಸಿದರು.

ಸೋಮವಾರ ವಿಧಾನಸಭೆಯಲ್ಲಿ ರಾಜ್ಯ ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ಭಾಷಣ ಮಾಡಿದ ಅವರು, ರಾಜ್ಯವು ದೇಶಿಯ ಪ್ರವಾಸಿಗರ ಆಗಮನದಲ್ಲಿ ದೇಶದಲ್ಲಿಯೆ ಐದನೆ ಸ್ಥಾನ ಹಾಗೂ ವಿದೇಶಿ ಪ್ರವಾಸಿಗರ ಆಗಮನದಲ್ಲಿ ಹನ್ನೊಂದನೆ ಸ್ಥಾನವನ್ನು ಹೊಂದಿದೆ ಎಂದರು.

ನನ್ನ ಸರಕಾರದ ಪ್ರವಾಸೋದ್ಯಮ ನೀತಿಯನ್ವಯ ಭಾರತದ ಪ್ರವಾಸಿ ತಾಣಗಳ ಪೈಕಿ ಕರ್ನಾಟಕವನ್ನು ಮೊದಲೆರಡರ ಸ್ಥಾನಕ್ಕೆ ತರಲು ಹಾಗೂ ವಿಶ್ವದ ಪ್ರವಾಸಿ ತಾಣಗಳ ಪೈಕಿ 50ನೆ ಸ್ಥಾನದೊಳಗೆ ತರುವ ಗುರಿ ಹೊಂದಲಾಗಿದೆ ಎಂದು ರಾಜ್ಯಪಾಲರು ಹೇಳಿದರು.

ರಾಜ್ಯವು ಆರ್ಥಿಕ ಸ್ಥಿತಿಯನ್ನು ದಕ್ಷತೆಯಿಂದ ನಿರ್ವಹಿಸುವುದರಲ್ಲಿ ಹೆಸರಾಗಿದೆ. ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಲು, ವಿತ್ತೀಯ ಕ್ರೋಡೀಕರಣ ನಕ್ಷೆಯನ್ನು ರೂಪಿಸುವಲ್ಲಿ ನಾವು ಮುಂಚೂಣಿಯಲ್ಲಿದ್ದೇವೆ. ಕರ್ನಾಟಕವು ರಾಷ್ಟ್ರದಲ್ಲಿಯೇ ಒಂದು ಮಾದರಿ ರಾಜ್ಯ. ಹಲವು ಪಗ್ರತಿಪರ ಯೋಜನೆಗಳು ವಿವಿಧ ರಾಜ್ಯಗಳಿಗೆ ಮಾದರಿಯಾಗಿವೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News