×
Ad

ಹಿರಿಯಡಕ: ಸ್ಪರ್ಧಾತ್ಮಕ ಪರೀಕ್ಷಾ ತಯಾರಿಗೆ ಕಾರ್ಯಗಾರ

Update: 2018-07-02 22:19 IST

ಉಡುಪಿ, ಜು.2: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡಕ ಇಲ್ಲಿ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ಮಾಹಿತಿ ಘಟಕ, ಐಕ್ಯುಎಸಿ ಘಟಕ ಹಾಗೂ ನರೆನ್ ಅಕಾಡೆಮಿ ಬ್ರಹ್ಮಾವರ ಇವರ ಸಹಯೋಗದೊಂದಿಗೆ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಸಿವಿಲ್ ಸರ್ವಿಸ್ ಪರೀಕ್ಷೆ ಕುರಿತಂತೆ ಒಂದು ದಿನದ ಪೂರ್ವ ತಯಾರಿ ಕಾರ್ಯಗಾರವನ್ನು ಇತ್ತೀಚೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಸಲಾಯಿತು.

ಕಾರ್ಯಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ನರೆನ್ ಅಕಾಡೆಮಿ ಯ ಚಂದ್ರಕಾಂತ್ ವಿ. ಹಾಗೂ ವಿವೇಕ್ ಕಾಮತ್, ಐಎಎಸ್, ಕೆಎಎಸ್ ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ.ಎ.ವಿ.ಬಾಳಿಗ ಆಸ್ಪತ್ರೆಯ ಖ್ಯಾತ ಮನೋವೈದ್ಯ ಡಾ. ವಿರೂಪಾಕ್ಷ ದೇವರಮನೆ ವಿದ್ಯಾಥಿಗರ್ಳಿಗೆ ಆರೋಗ್ಯ ಸಲಹೆ ನೀಡಿದರು.

ಕಾಲೇಜಿನ ಪ್ರಾಂಶುಪಾಲೆ ಡಾ. ನಿಕೇತನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಉದ್ಯೋಗ ಮಾಹಿತಿ ಘಟಕದ ಸಂಚಾಲಕ ಹಾಗೂ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ದಿನೇಶ್ ಎಂ. ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳಾ ಡಿದರು. ಐಕ್ಯುಎಸಿ ಸಂಚಾಲಕ ಹಾಗೂ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಸುಮನ ಬಿ. ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News