×
Ad

ಅಪಘಾತಕ್ಕೀಡಾದವರನ್ನು ರಕ್ಷಿಸಲು ಹೋದ ಲಾರಿ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ: ಮೃತ್ಯು

Update: 2018-07-03 19:00 IST

ಬೆಂಗಳೂರು, ಜು.3: ಅಪಘಾತಕ್ಕೀಡಾಗಿ ಬಿದ್ದಿದ್ದ ದ್ವಿಚಕ್ರವಾಹನ ಸವಾರರನ್ನು ರಕ್ಷಿಸಲು ಹೋದ ಲಾರಿ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಮೃತಪಟ್ಟಿರುವ ದಾರುಣ ಘಟನೆ ಕೆಂಗೇರಿ ಸಂಚಾರ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ನಡೆದಿದೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ನಿವಾಸಿ ಬಿ.ಎಸ್.ರಾಘವೇಂದ್ರ (29) ಮೃತ ಚಾಲಕ ಎಂದು ಪೊಲೀಸರು ಗುರುತಿಸಿದ್ದಾರೆ. ಇನ್ನು, ದ್ವಿಚಕ್ರ ವಾಹನದಲ್ಲಿ ಅಪಘಾತಕ್ಕೀಡಾದ ಗಿರೀಶ್ ಮತ್ತು ಅಭಿಷೇಕ್‌ರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಮಗಳವಾರ ಬೆಳಗಿನ ಜಾವ 1.45ರ ಸುಮಾರಿಗೆ ಮೈಸೂರು ರಸ್ತೆ ಮೇಲ್ಸೇತುವೆ ಸಮೀಪದ ನೈಸ್ ರಸ್ತೆಯಲ್ಲಿ ಶರವೇಗದಿಂದ ಹೋಗುತ್ತಿದ್ದ ದ್ವಿಚಕ್ರವಾಹನ ತಡೆಗೋಡೆಗೆ ಅಪ್ಪಳಿಸಿದ ಪರಿಣಾಮ ದ್ವಿಚಕ್ರವಾಹನ ಸವಾರರಿಬ್ಬರು ಕೆಳಗೆ ಬಿದ್ದಿದ್ದು, ಅಪಘಾತ ಸಂಭವಿಸಿ ಇಬ್ಬರು ರಸ್ತೆ ಬದಿ ಬಿದ್ದಿರುವುದನ್ನು ಗಮನಿಸಿದ ಲಾರಿ ಚಾಲಕ ರಾಘವೇಂದ್ರ, ವಾಹನ ನಿಲ್ಲಿಸಿ ಘಟನಾ ಸ್ಥಳಕ್ಕೆ ಹೋಗುತ್ತಿದ್ದಾಗ ಶರವೇಗದಲ್ಲಿ ಬರುತ್ತಿದ್ದ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಈ ಸಂಬಂಧ ಕೆಂಗೇರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News