ಮಧ್ಯಪ್ರದೇಶ ಬಾಲಕಿ ಅತ್ಯಾಚಾರ: ಎನ್‌ಎಸ್‌ಯುಐ ಖಂಡನೆ
Update: 2018-07-03 20:39 IST
ಉಡುಪಿ, ಜು.3: ಮಧ್ಯಪ್ರದೇಶದ ಏಳು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಉಡುಪಿ ಜಿಲ್ಲಾ ಎನ್‌ಎಸ್‌ಯುಐ ಆಗ್ರಹಿಸಿದೆ.
ದೇಶದಲ್ಲಿ ಮಹಿಳೆಯರು ಮತ್ತು ಹಸುಳೆಗಳ ಮೇಲೆ ನಿತ್ಯ ನಿರಂತರ ದೌರ್ಜನ್ಯಗಳು ನಡೆಯುತ್ತಿದ್ದು, ಇದಕ್ಕೆ ಕಡಿವಾಣ ಹಾಕುವ ಅಗತ್ಯತೆ ಇದೆ. ಮಧ್ಯಪ್ರದೇಶದಲ್ಲಿ ಆಡಳಿತ ನಡೆಸುತ್ತಿರುವ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಸರಕಾರ ಮಹಿಳೆಯರಿಗೆ ಹಾಗೂ ಹೆಣ್ಣುಮಕ್ಕಳಿಗೆ ರಕ್ಷಣೆ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಮಧ್ಯಪ್ರದೇಶ ಸರಕಾರ ಮತ್ತು ಆಡಳಿತ ವ್ಯವಸ್ಥೆ ಆರೋಪಿಗೆ ಕಠಿಣವಾದ ಶಿಕ್ಷೆಯನ್ನು ವಿಧಿಸಬೇಕು ಎಂದು ಜಿಲ್ಲಾ ಎನ್‌ಎಸ್ ಯುಐ ಅಧ್ಯಕ್ಷ ಕ್ರಿಸ್ಟನ್ ಡಿಆಲ್ಮೇಡಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.