ಕಾರು ಢಿಕ್ಕಿ: ಪಾದಚಾರಿಗೆ ಗಾಯ
Update: 2018-07-03 20:41 IST
ಬಂಟ್ವಾಳ, ಜು. 3: ಕಾರೊಂದು ಪಾದಚಾರಿಯೊಬ್ಬರಿಗೆ ಢಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮೆಲ್ಕಾರ್‌ನಲ್ಲಿ ಮಂಗಳವಾರ ನಡೆದಿದೆ.
ಶಂಭೂರು ಮರ್ದೋಳಿ ನಿವಾಸಿ ಪದ್ಮನಾಭ (52) ಗಂಭೀರವಾಗಿ ಗಾಯಗೊಂಡ ಪಾದಚಾರಿ ಎಂದು ಗುರುತಿಸಲಾಗಿದೆ. ಪದ್ಮನಾಭ ಅವರು ಮೆಲ್ಕಾರ್ ಜಂಕ್ಷನ್‌ನಲ್ಲಿ ನಡೆದು ಕೊಂಡು ಹೋಗುತ್ತಿದ್ದ ವೇಳೆ ಅತೀ ವೇಗದಲ್ಲಿ ಚಲಾಯಿಸಿಕೊಂಡು ಬಂದ ಕಾರು ಢಿಕ್ಕಿ ಹೊಡೆದು ಪರಾರಿಯಾಗಿತ್ತು. ಘಟನೆಯಿಂದ ಪದ್ಮನಾಭ ಅವರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಮೆಲ್ಕಾರ್ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಿದ್ದು, ತನಿಖೆ ಮುಂದುವರಿದಿದೆ.