×
Ad

ಬೈಕ್ ಢಿಕ್ಕಿ: ಪಾದಚಾರಿ ಮೃತ್ಯು

Update: 2018-07-03 22:48 IST

ಕಾಪು, ಜು.3: ಪಾಂಗಾಳ ಶ್ರೀ ಜನಾದರ್ನ ದೇಸ್ಥಾನದ ಎದುರು ರಾಷ್ಟೀಯ ಹೆದ್ದಾರಿ 66ರಲ್ಲಿ ಜು.1ರಂದು ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಿಂತುಕೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಪಡುಬಿದ್ರೆಯ ಮೋಹನ್ ರಾವ್ ಎಂದು ಗುರುತಿಸಲಾಗಿದೆ. ಸಂಜೆ 5:30ರ ಸುಮಾರಿಗೆ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಬೈಕ್ ರಸ್ತೆ ಬದಿ ನಿಂತುಕೊಂಡಿದ್ದ ಮೋಹನ್ ರಾವ್‌ಗೆ ಡಿಕ್ಕಿ ಹೊಡೆಯಿತು. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ರಾತ್ರಿ 8:30ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News