ಚಿಕ್ಕಮಗಳೂರು: ಮಹಿಳೆಯ ಕತ್ತು ಹಿಸುಕಿ ಕೊಲೆ; ಪತಿಯಿಂದಲೇ ಹತ್ಯೆ ಶಂಕೆ
Update: 2018-07-03 23:24 IST
ಚಿಕ್ಕಮಗಳೂರು, ಜು.3: ವಿವಾಹಿತ ಮಹಿಳೆಯೊಬ್ಬರನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಚಿಕ್ಕನಹಳ್ಳಿ ಗ್ರಾಮದ ಅರ್ಜುನ್ ಎಂಬವರ ಪತ್ನಿ ಯಶೋಧಾ(25) ಕೊಲೆಯಾದ ಮಹಿಳೆಯಾಗಿದ್ದು, ಈಕೆಯನ್ನು ಪತಿ ಅರ್ಜುನನೇ ಕೊಲೆ ಮಾಡಿರ ಬಹುದೆಂದು ಮಹಿಳೆಯ ಸಂಬಂಧಿಕರು ಶಂಕೆ ವ್ಯಕ್ತಪಡಿಸಿದ್ದಾರೆ.
ಮಹಿಳೆಯ ಮೃತ ದೇಹವು ಚಿಕ್ಕನಹಳ್ಳಿಯ ಆಕೆಯ ಮನೆಯಲ್ಲಿ ಮುಂಜಾನೆ ಪತ್ತೆಯಾಗಿದ್ದು. ಘಟನೆ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮಹಿಳೆಯ ಪತಿ ನಾಪತ್ತೆಯಾಗಿದ್ದಾನೆಂದು ತಿಳಿದು ಬಂದಿದ್ದು, ಹೆಚ್ಚಿನ ಮಾಹಿತಿ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.