ಲೆಫ್ಟಿನೆಂಟ್ ಗವರ್ನರ್‌ಗೆ ಸ್ವತಂತ್ರ ಅಧಿಕಾರ ಇಲ್ಲ: ಸುಪ್ರೀಂ ಕೋರ್ಟ್

Update: 2018-07-04 07:02 GMT

 ಹೊಸದಿಲ್ಲಿ, ಜು.4: ದಿಲ್ಲಿಗೆ ಸಂಪೂರ್ಣ ರಾಜ್ಯ ಸ್ಥಾನಮಾನ ಸಾಧ್ಯವಿಲ್ಲ  ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳ ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠ  ಬುಧವಾರ ತೀರ್ಪು ನೀಡಿದೆ.
 ಲೆಫ್ಟಿನೆಂಟ್ ಗವರ್ನರ್‌ಗೆ ಸ್ವತಂತ್ರ ಅಧಿಕಾರ ಇಲ್ಲ. ಸಚಿವ ಸಂಪುಟದ ಸಲಹೆಯಂತೆ ಅವರು ಕೆಲಸ ನಿರ್ವಹಿಸಬೇಕಾಗುತ್ತದೆ. ಎಲ್ಲ ರಾಜ್ಯಗಳ ರಾಜ್ಯಪಾಲರಿಗೆ ಇರುವಂತೆ ಲೆಫ್ಟಿನೆಂಟ್ ಗವರ್ನರ್‌ಗೆ ಅಧಿಕಾರ ಇರುತ್ತದೆ. ಅದಕ್ಕಿಂತ ಹೆಚ್ಚು ಅಧಿಕಾರ ಇಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಅಧಿಕಾರ ಒಂದೇ ಕಡೆ ಕೇಂದ್ರಿಕೃತವಾಗಿರಬಾರದು. ಎಲ್ಲ ಕೆಲಸಗಳಿಗೂ ಸರಕಾರ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆಯಬೇಕಿಲ್ಲ. ಲೆಫ್ಟಿನೆಂಟ್ ಗವರ್ನರ್ ಅವರು ಸಚಿವರಿಗೆ ಗೌರವ ಕೊಡಬೇಕು. ದಿಲ್ಲಿ ಸರಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ಜೊತೆಯಾಗಿ ಕೆಲಸ ಮಾಡಲಿ ಎಂದು ಸುಪ್ರೀಂಕೋರ್ಟ್ ಹೇಳಿದೆ.
    ಜನರಿಂದ ನೇರವಾಗಿ ಆಯ್ಕೆಯಾದ ಸರಕಾರಕ್ಕೆ ಹೆಚ್ಚಿನ ಶಕ್ತಿ ಇರುತ್ತದೆ. ಕ್ಯಾಬಿನೆಟ್ ಸಲಹೆ ಪಡೆದು ಎಲ್‌ಜಿ ಕಾರ್ಯ ನಿರ್ವಹಿಸಲಿ. ಕೇಂದ್ರ ಮತ್ತು ರಾಜ್ಯ ಸರಕಾರಗಳ ಹೊಂದಾಣಿಕೆ ಇರಲಿ. ಸರಕಾರದ ಎಲ್ಲ ನಿರ್ಧಾರಗಳಲ್ಲೂ ಎಲ್‌ಜಿ ತಲೆಹಾಕಬಾರದು. ಲೆಫ್ಟಿನೆಂಟ್ ಗವರ್ನರ್ ಮತ್ತು ಸರಕಾರ ನಡುವೆ ಸಮಸ್ಯೆ ಉಂಟಾಗ ಸಮಸ್ಯೆ ಬಗೆಹರಿಸಲು ರಾಷ್ಟ್ರಪತಿ ಬಳಿ ತೆರಳಲಿ. ದಿಲ್ಲಿಯಲ್ಲಿ ಅರಾಜಕತೆ ಸೃಷ್ಠಿಗೆ ಅವಕಾಶ ಇಲ್ಲ ಎಂದು ಸುಪ್ರೀಂ ಕೋರ್ಟ್‌ನ ಐವರ ಸದಸ್ಯರ ಪೀಠ ಅಭಿಪ್ರಾಯಪಟ್ಟಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News