×
Ad

ದಾವಣಗೆರೆ: ಬಾಣಂತಿ ಸಾವಿಗೆ ವೈದ್ಯರೇ ಕಾರಣವೆಂದು ಆರೋಪಿಸಿ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ; ಆರೋಪ

Update: 2018-07-04 18:27 IST

ದಾವಣಗೆರೆ,ಜು.04: ಮಂಗಳವಾರ ಹೆರಿಗೆಯಾಗಿದ್ದ ಬಾಣಂತಿಯೊಬ್ಬರು ನಗರದ ಚಾಮರಾಜಪೇಟೆಯ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೆ ಕಾರಣ ಎಂದು ಆರೋಪಿಸಿ ಮೃತಳ ಸಂಬಂಧಿಕರು ಆಸ್ಪತ್ರೆಯ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾದ ಘಟನೆ ನಡೆದಿದೆ.

ತಾಲೂಕಿನ ಕಕ್ಕರಗೊಳ್ಳ ಗ್ರಾಮದ ಬಾಣಂತಿ ಷರೀಫಾ ಭಾನು ಮೃತ ಮಹಿಳೆ. ವೈದ್ಯರು ಕೊಟ್ಟ ಇಂಜೆಕ್ಷನ್‍ನಿಂದಲೇ ಅವರು ಮೃತಪಟ್ಟಿದ್ದಾರೆ ಎಂದು ಸಂಬಂಧಿಕರು ಗಲಾಟೆ ನಡೆಸಿದ್ದಾರೆ ಎನ್ನಲಾಗಿದೆ.

'ಮಂಗಳವಾರ ಷರೀಫಾ ಭಾನು ಗಂಡು ಮಗುವಿಗೆ ಜನ್ಮ ನೀಡಿದ್ದು, ಬುಧವಾರ ತೀವ್ರ ಅಸ್ವಸ್ಥಗೊಂಡಿದ್ದರು. ಹೀಗಾಗಿ, ವೈದ್ಯರು ಎರಡು ಇಂಜೆಕ್ಷನ್ ಕೊಟ್ಟಿದ್ದರು. ಇದಾದ ಕೆಲ ಗಂಟೆಗಳಲ್ಲಿಯೇ ಬಾಣಂತಿ ಮೃತಪಟ್ಟಿದ್ದಾಳೆ. ಆಕೆಯ ಸಾವಿಗೆ ಆಸ್ಪತ್ರೆಯೆ ವೈದ್ಯರ ನಿರ್ಲಕ್ಷ್ಯವೇ ಕಾರಣ' ಎಂದು ಆರೋಪಿಸಿದ ಮೃತಳ ಸಂಬಂಧಿಕರು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಗಾಂಧಿನಗರ ಪೊಲೀಸರು ಭೇಟಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News