ನಮ್ಮ ಕುಟುಂಬದ ‘ಅಕ್ರಮ ಆಸ್ತಿ’ ದಾಖಲೆಗಳಿದ್ದರೆ ನೀಡಲಿ: ಸಿ.ಎಂ ಕುಮಾರಸ್ವಾಮಿ

Update: 2018-07-04 13:43 GMT

ಬೆಂಗಳೂರು, ಜು. 4: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ಅಕ್ರಮ ಆಸ್ತಿ ಸಂಪಾದಿಸಿದೆ ಎಂದು ದೂರುವುದನ್ನು ಬಿಟ್ಟು ಈ ಬಗ್ಗೆ ದಾಖಲೆಗಳಿದ್ದರೆ ಒದಗಿಸಲಿ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬುಧವಾರ ಪ್ರತಿಕ್ರಿಯೆ ನೀಡಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಸದಸ್ಯರೊಬ್ಬರು ತಮ್ಮ ಕುಟುಂಬದ ವಿರುದ್ಧ ಆರೋಪ ಮಾಡಿದ್ದಾರೆ. ಅಕ್ರಮ ಆಸ್ತಿ ಪಾಸ್ತಿ ಮಾಡಿರುವ ಬಗ್ಗೆ ಪೂರಕವಾದ ದಾಖಲೆಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು.

ಸುಖಾ ಸುಮ್ಮನೆ ಸುಳ್ಳು ಆರೋಪ ಸರಿಯಲ್ಲ. ಅದಕ್ಕೆ ಯಾವುದೇ ಬೆಲೆಯೂ ಇರುವುದಿಲ್ಲ. ನಮ್ಮ ಕುಟುಂಬದ ವಿರುದ್ಧ ಟೀಕೆಗಳು, ಆರೋಪಗಳನ್ನು ಮಾಡುವುದು ಹೊಸದೇನಲ್ಲ. ಈ ಬಗ್ಗೆ ಈಗಾಗಲೇ ಹಲವು ತನಿಖೆಗಳನ್ನು ಮಾಡಿದ್ದು ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾರ್ವಜನಿಕ ಜೀವನದಲ್ಲಿ ಟೀಕೆಗಳು ಸಹಜ. ಆದರೆ ಟೀಕೆ ಮಾಡುವ ವೇಳೆ ಅದಕ್ಕೆ ಪೂರಕ ದಾಖಲೆಗಳನ್ನಿಟ್ಟುಕೊಂಡು ಆರೋಪ ಮಾಡಬೇಕು. ಅದನ್ನು ಬಿಟ್ಟು ಸುಳ್ಳು ಆರೋಪ ಸಲ್ಲ ಎಂದು ಆಕ್ಷೇಪಿಸಿದ ಅವರು, ನಮ್ಮ ಕುಟುಂಬ ಎಲ್ಲ ಆಸ್ತಿ ತೆರಿಗೆಗಳನ್ನು ಪಾವತಿಸಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News