ಥರೂರ್ ನಿರೀಕ್ಷಣಾ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ನ್ಯಾಯಾಲಯ

Update: 2018-07-04 14:36 GMT

ಹೊಸದಿಲ್ಲಿ, ಜು.4: ಪತ್ನಿ ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಮುಖಂಡ ಶಶಿ ಥರೂರ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತ ತೀರ್ಪನ್ನು ದಿಲ್ಲಿಯ ನ್ಯಾಯಾಲಯ ಕಾಯ್ದಿರಿಸಿದೆ.

ಈ ಪ್ರಕರಣದಲ್ಲಿ ಆರೋಪಿ ಎಂದು ಹೆಸರಿಸಲಾಗಿರುವ ಕೇರಳದ ಸಂಸದ ಥರೂರ್ ವಿರುದ್ಧ ಈಗಾಗಲೇ ಸಮನ್ಸ್ ಜಾರಿಯಾಗಿದೆ. ಈ ಪ್ರಕರಣದಲ್ಲಿ ಈಗಾಗಲೇ ಆರೋಪಪಟ್ಟಿ ದಾಖಲಿಸಲಾಗಿದ್ದು, ಕಸ್ಟಡಿ ವಿಚಾರಣೆ ಅಗತ್ಯವಿಲ್ಲ ಎಂದು ವಿಶೇಷ ತನಿಖಾ ತಂಡ ತಿಳಿಸಿರುವ ಕಾರಣ ತನಗೆ ನಿರೀಕ್ಷಣಾ ಜಾಮೀನು ನೀಡಬೇಕು ಎಂದು ಥರೂರ್ ಕೋರಿಕೆ ಸಲ್ಲಿಸಿದ್ದಾರೆ. ಥರೂರ್‌ಗೆ ನಿರೀಕ್ಷಣಾ ಜಾಮೀನು ನೀಡುವುದನ್ನು ವಿರೋಧಿಸಿದ ದಿಲ್ಲಿ ಪೊಲೀಸರು, ಜಾಮೀನು ನೀಡಿದರೆ ಆರೋಪಿ ದೇಶದಿಂದ ಪಲಾಯನ ಮಾಡಬಹುದು ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಥರೂರ್ ವಿರುದ್ಧ ವಿಚಾರಣೆ ಮುಂದುವರಿಸಲು ಸಾಕಷ್ಟು ಕಾರಣಗಳಿವೆ. ಆದ್ದರಿಂದ ಥರೂರ್ ಜುಲೈ 7ರಂದು ತನ್ನೆದುರು ಹಾಜರಾಗಬೇಕು ಎಂದು ಜೂನ್ 5ರಂದು ನ್ಯಾಯಾಲಯ ಸಮನ್ಸ್ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News