ಪೌಷ್ಟಿಕ ಆಹಾರ ದುರುಪಯೋಗದ ವಿರುದ್ಧ ಕ್ರಮ: ಉಡುಪಿ ಜಿಲ್ಲಾಧಿಕಾರಿ ಎಚ್ಚರಿಕೆ
Update: 2018-07-04 22:14 IST
ಉಡುಪಿ, ಜು.4: 2018-19ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ ಕೊರಗ ಹಾಗೂ ಮಲೆಕುಡಿಯ ಜನಾಂಗದವರಿಗೆ ಜುಲೈ ತಿಂಗಳಿನಿಂದ ಡಿಸೆಂಬರ್ ವರೆಗೆ ಪೌಷ್ಟಿಕ ಆಹಾರವನ್ನು ಐಟಿಡಿಪಿ ಇಲಾಖೆ ಮೂಲಕ ವಿತರಿಸುತ್ತಿದ್ದು, ಈ ಆಹಾರ ಸಾಮಾಗ್ರಿಗಳನ್ನು ಖಾಸಗಿ ವ್ಯಕ್ತಿಗಳಿಗೆ ಹಾಗೂ ಅಂಗಡಿಗಳಿಗೆ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿವೆ. ಆದ್ದರಿಂದ ಕೊರಗ ಹಾಗೂ ಮಲೆಕುಡಿಯ ಜನಾಂಗದವರಿಗೆ ಸರಕಾರದಿಂದ ಪೂರೈಕೆ ಮಾಡಿದ ಆಹಾರ ಸಾಮಾಗ್ರಿಗಳನ್ನು ಖರೀದಿಸುವುದು ಅಪರಾಧ ವಾಗಿದ್ದು, ಇಂತಹ ಪ್ರಕರಣಗಳು ಕಂಡುಬಂದಲ್ಲಿ ಖರೀದಿಸುವವರ ಮೇಲೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿ ಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿಗಳ ಪ್ರಕಟಣೆ ಎಚ್ಚರಿಸಿದೆ.