ಉಡುಪಿ: ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ಉಚಿತ ತರಬೇತಿ
Update: 2018-07-04 22:15 IST
ಉಡುಪಿ, ಜು.4: ಉಡುಪಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇವರ ಸಹಭಾಗಿತ್ವದಲ್ಲಿ ಸ್ಟಡಿ ಸರ್ಕಲ್ ಕಾರ್ಯಕ್ರಮದಡಿ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮವನ್ನು ಜು.6 ರಿಂದ ಆ.18ರವರೆಗೆ ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ತರಬೇತಿ ಉಚಿತವಾಗಿದ್ದು, ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾ ಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಣಿಪಾಲ ದೂರವಾಣಿ: 0820-2574869ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.