×
Ad

ಉಡುಪಿ; ಕಲಾ ತಂಡಗಳ ಆಯ್ಕೆಗೆ ಅರ್ಜಿ ಆಹ್ವಾನ

Update: 2018-07-04 22:21 IST

ಉಡುಪಿ, ಜು.4: ನಿರಂತರವಾಗಿ ಕನ್ನಡ ಪರ, ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸುವ ಸಂಘ-ಸಂಸ್ಥೆಗಳಿಗೆ ಅವರು ಹಮ್ಮಿಕೊಳ್ಳುವ ಕಾರ್ಯಕ್ರಮಕ್ಕೆ ಕಲಾ ತಂಡಗಳನ್ನು ಪ್ರಾಯೋಜಿಸಲು ಅವಕಾಶವಿದ್ದು, ಇದಕ್ಕಾಗಿ ಜಿಲ್ಲಾ ಮಟ್ಟದ ಕಲಾ ತಂಡಗಳ ಆಯ್ಕೆಗೆ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ಮಟ್ಟದಲ್ಲಿ ಕಲಾ ತಂಡಗಳನ್ನು ಪ್ರಾಯೋಜನೆ ಮಾಡುವಾಗ ಪಾರದರ್ಶಕತೆ ಹಾಗೂ ಕಲಾತಂಡಗಳಿಗೆ ಸಮಾನ ಅವಕಾಶ ನೀಡಲು ಯಕ್ಷಗಾನ, ಜಾನಪದ, ಸುಗಮ ಸಂಗೀತ, ಶಾಸ್ತ್ರೀಯ ಸಂಗೀತ, ಶಾಸ್ತ್ರೀಯ ನೃತ್ಯ, ಸಮೂಹ ನೃತ್ಯ ಪೌರಾಣಿಕ-ಸಾಮಾಜಿಕ ನಾಟಕ, ಗೊಂಬೆಯಾಟ, ಜಾನಪದ ನೃತ್ಯ, ಗಮಕ, ಕಥಾ ಕೀರ್ತನ, ದಾಸರ ಪದಗಳು ಹಾಗೂ ವಿವಿಧ ಜಾನಪದ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸದೇ ಇರುವ ಹಾಗೂ ಸಂದರ್ಶನಕ್ಕೆ ಹಾಜರಾಗದೇ ಇರುವ ಕಲಾವಿದರು/ಕಲಾತಂಡಗಳಿಗೆ ಯಾವುದೇ ತರಹದ ಕಾರ್ಯಕ್ರಮಗಳನ್ನು ನೀಡಲಾಗುವುದಿಲ್ಲ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿ ಮತ್ತು ವಿವರಗಳಿಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲೆ ಇವರನ್ನು (ದೂರವಾಣಿ:0820-2575552) ಸಂಪರ್ಕಿಸು ವಂತೆ ಇಲಾಖಾ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News