×
Ad

ಮೈಸೂರು: ಪ್ರೇಮ ವೈಫಲ್ಯದಿಂದ ಮನನೊಂದು ಯುವಕ ಆತ್ಮಹತ್ಯೆ

Update: 2018-07-04 22:38 IST

ಮೈಸೂರು,ಜು.4: ಅತ್ತೆ ಮಗಳು ತನ್ನನ್ನು ಮದುವೆಯಾಗಲಿಲ್ಲ ಎನ್ನುವ ಕಾರಣಕ್ಕೆ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಪಡುವಾರಹಳ್ಳಿಯಲ್ಲಿ ನಡೆದಿದೆ.

ಮೃತನನ್ನು ಹೆಚ್.ಡಿ.ಕೋಟೆ ಮೂಲದ  ಯುವಕ ಸತೀಶ್(23) ಎಂದು ಗುರುತಿಸಲಾಗಿದ್ದು, ಈತ ಪಡುವಾರಹಳ್ಳಿಯ ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಅತ್ತೆ ಮಗಳನ್ನು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ. ಆದರೆ ಆಕೆ ಬೇರೆ ಯುವಕನನ್ನು ವಿವಾಹವಾದ ಹಿನ್ನಲೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಸತೀಶ್ ಒಂದು ವಾರದ ಹಿಂದೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಾವನ್ನಪ್ಪಿದ್ದಾನೆ. ಈ ಸಂಬಂಧ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News