ಬಜೆಟ್ ಗೆ ಸಚಿವ ಸಂಪುಟ ಅಸ್ತು
Update: 2018-07-05 11:29 IST
ಬೆಂಗಳೂರು , ಜು.5: ಸಮ್ಮಿಶ್ರ ಸರಕಾರದ ಚೊಚ್ಚಲ ಬಜೆಟ್ ಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ವಿಧಾನಸೌಧದಲ್ಲಿ ಮುಖ್ಯ ಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಜೆಟ್ ಗೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಉಪಮುಖ್ಯ ಮಂತ್ರಿ ಡಾ.ಜಿ. ಪರಮೇಶ್ವರ ಅವರೊಂದಿಗೆ ಸಿಎಂ ಕುಮಾರಸ್ವಾಮಿ ಸದನಕ್ಕೆ ಆಗಮಿಸಿದರು.