ನೇರಳಕಟ್ಟೆ: ಲಾರಿ ಢಿಕ್ಕಿ; ಬೈಕ್ ಸವಾರರಿಬ್ಬರಿಗೆ ಗಂಭೀರ ಗಾಯ
Update: 2018-07-05 12:24 IST
ಬಂಟ್ವಾಳ, ಜು. 5: ಲಾರಿಯೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಿಟ್ಲ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಗುರುವಾರ ನಡೆದಿದೆ.
ಪಾಟ್ರಕೋಡಿಯ ನಿವಾಸಿಗಳಾದ ಬಿಲಾಲ್ ಹಾಗೂ ಅಲ್ತಾಫ್ ಗಾಯಗೊಂಡವರು ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಕಡೆಗೆ ಹೋಗುತ್ತಿದ್ದ ಲಾರಿ ಎದುರಿನಿಂದ ಬರುತಿದ್ದ ಬೈಕ್ ಗೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.