ದ.ಕ. ಜಿಲ್ಲಾ ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಮೌನ ಪ್ರತಿಭಟನೆ
ಮಂಗಳೂರು, ಜು.5: ಮಧ್ಯಪ್ರದೇಶದಲ್ಲಿ ನಡೆದಿರುವ ಬಾಲಕಿಯ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ದ.ಕ. ಜಿಲ್ಲಾ ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಗುರುವಾರ ದ.ಕ. ಜಿಲ್ಲಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ನಡೆಯಿತು.
ಬಾಯಿಗೆ ಕಪ್ಪುಪಟ್ಟಿ ಕಟ್ಟಿ ಮೌನ ಪ್ರತಿಭಟನೆ ನಡೆಸಿದ ಒಕ್ಕೂಟದ ಸದಸ್ಯರು ಬಳಿಕ ಜಿಲ್ಲಾಧಿಕಾರಿಯ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿ, ನ್ಯಾಯಕ್ಕಾಗಿ ಆಗ್ರಹಿಸಿದರು.
ಅತ್ಯಾಚಾರ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು, ನಾಗರಿಕ ಸಮುದಾಯವನ್ನು ತಲೆತಗ್ಗಿಸುವಂತೆ ಮಾಡಿದ ಈ ಕೃತ್ಯದಿಂದ ನೊಂದ ಸಂತ್ರಸ್ತೆಗೆ ನ್ಯಾಯ ದೊರೆಕಿಸಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಮೌನ ಪ್ರತಿಭಟನೆಯಲ್ಲಿ ಒಕ್ಕೂಟದ ಅಧ್ಯಕ್ಷ ಮತ್ತು ಮಾಜಿ ಮೇಯರ್ ಕೆ.ಅಶ್ರಫ್, ಗಡಿನಾಡು ರಕ್ಷಣಾ ವೇದಿಕೆಯ ಅಧ್ಯಕ್ಷ ಸಿದ್ದೀಕ್ ತಲಪಾಡಿ, ನ್ಯಾಯವಾದಿ ಹನೀಫ್ ಯು., ಬ್ಯಾರಿ ಅಕಾಡಮಿಯ ಸದಸ್ಯ ಹುಸೈನ್ ಕಾಟಿಪಳ್ಳ, ಹಮೀದ್ ಕುದ್ರೋಳಿ, ಮೊಯ್ದಿನ್ ಮೋನು, ಸಾಲಿ ಬಜ್ಪೆ, ಶಬ್ಬೀರ್ ತಲಪಾಡಿ, ತಬೂಕ್ ದಾರಿಮಿ ಕಿನ್ಯ, ಹಿದಾಯತ್ ಮಾರಿಪಳ್ಳ, ಶಾಹುಲ್ ಕೆಂಪಿ, ಸಿರಾಜ್ ಬಜ್ಪೆ, ರಫೀಕ್ ಪಾನೇಲ, ಅದ್ದು ಕೃಷ್ಣಾಪುರ ಮತ್ತಿತರರು ಪಾಲ್ಗೊಂಡಿದ್ದರು.