ಗುಂಪಿನಿಂದ ಥಳಿಸಿ ಹತ್ಯೆ ಪ್ರಕರಣ: ಪರಿಶೀಲಿಸಲು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸೂಚನೆ

Update: 2018-07-05 15:16 GMT

ಹೊಸದಿಲ್ಲಿ, ಜು. 5: ಸಾಮಾಜಿಕ ಜಾಲ ತಾಣದಲ್ಲಿ ಹರಡಿದ ಮಕ್ಕಳ ಅಪಹರಣದ ವದಂತಿಯಿಂದ ಉದ್ರಿಕ್ತರಾದ ಗುಂಪು ನಡೆಸಿದ ಹತ್ಯೆ ಪ್ರಕರಣದ ಬಗ್ಗೆ ಪರಿಶೀಲಿಸುವಂತೆ ಕೇಂದ್ರ ಸರಕಾರ ಗುರುವಾರ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.

 ಕಳೆದ ಎರಡು ತಿಂಗಳಲ್ಲಿ ಮಕ್ಕಳ ಅಪಹರಣಕಾರರು ಎಂದು 20ಕ್ಕೂ ಅಧಿಕ ಜರನ್ನು ಥಳಿಸಿ ಹತ್ಯೆಗೈಯಲಾಗಿದೆ. ಮಹಾರಾಷ್ಟ್ರದ ಧುಲೆ ಜಿಲ್ಲೆಯಲ್ಲಿ ಇತ್ತೀಚೆಗೆ ಐದು ಮಂದಿಯನ್ನು ಥಳಿಸಿ ಹತ್ಯೆ ನಡೆಸಲಾಗಿತ್ತು. ಮಕ್ಕಳ ಅಪಹರಣದ ಬಗೆಗಿನ ವದಂತಿಯನ್ನು ಆರಂಭದಲ್ಲೇ ಪತ್ತೆ ಹಚ್ಚಲು ಸಾಧ್ಯವಾಗುವಂತೆ ಗಮನ ಇರಿಸಿ ಹಾಗೂ ಇದನ್ನು ತಡೆಗಟ್ಟಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಅದು ಹೇಳಿದೆ.

 ಸಾಮಾಜಿಕ ಜಾಲ ತಾಣಗದಲ್ಲಿ ಹರಡುತ್ತಿರುವ ಮಕ್ಕಳ ಅಪಹರಣಕಾರರು ಎಂಬ ವದಂತಿಯಿಂದ ಸಂಭವಿಸುತ್ತಿರುವ ಗುಂಪಿನಿಂದ ಥಳಿಸಿ ಹತ್ಯೆ ಪ್ರಕರಣಗಳನ್ನು ತಡೆಯಲು ಕ್ರಮ ತೆಗೆದುಕೊಳ್ಳಿ ಎಂದು ಕೇಂದ್ರ ಸರಕಾರ ರಾಜ್ಯ ಹಾಗೂ ಕೇಂದ್ರಾಡಳಿತ ಸರಕಾರಗಳಿಗೆ ನಿರ್ದೇಶಿಸಿದೆ ಎಂದು ಗೃಹ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ. ದುರ್ಬಲ ಪ್ರದೇಶಗಳನ್ನು ಗುರುತಿಸುವಂತೆ ಹಾಗೂ ಆತ್ಮಸ್ಥೈರ್ಯ ಹೆಚ್ಚಿಸಲು, ಜಾಗೃತಿ ಮೂಡಿಸಲು ಸಮುದಾಯದ ಜನರನ್ನು ತಲುಪುವ ಕಾರ್ಯಕ್ರಮಗಳನ್ನು ಆಯೋಜಿಸಲು ಜಿಲ್ಲಾ ಆಡಳಿತಕ್ಕೆ ನಿರ್ದೇಶಿಸುವಂತೆ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರಕಾರ ಸೂಚಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News