×
Ad

ಉಡುಪಿ: ಜು. 6ರಂದು ಪೊಲೀಸ್ ಫೋನ್ ಇನ್ ಕಾರ್ಯಕ್ರಮ

Update: 2018-07-05 22:52 IST

ಉಡುಪಿ, ಜು.5: ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಬನ್ನಂಜೆಯಲ್ಲಿರುವ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆಸುವ ನೇರ ಫೋನ್ ಇನ್ ಕಾರ್ಯಕ್ರಮ  ಜು.6ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.

ಸಾರ್ವಜನಿಕರು ನೇರ ಫೋನ್ ಇನ್ ಕಾರ್ಯಕ್ರಮಕ್ಕೆ ಕರೆ ಮಾಡಿ ತಮ್ಮ ಅಹವಾಲುಗಳನ್ನು ತಿಳಿಸಬಹುದು. ಅಥವಾ ಪೊಲೀಸ್ ಇಲಾಖಾ ಕರ್ತವ್ಯಕ್ಕೆ ಸಂಬಂಧಪಟ್ಟಂತೆ ಸಲಹೆಗಳು ಅಥವಾ ವಾಸಿಸುವ ಪ್ರದೇಶ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆಗಳೇನಾದರೂ ನಡೆಯುತ್ತಿದ್ದಲ್ಲಿ ಮಾಹಿತಿ ಅಥವಾ ಪೊಲೀಸ್ ಇಲಾಖಾ ಕರ್ತವ್ಯ ನಿರ್ವಹಣೆ ಬಗ್ಗೆ ದೂರು ಹಾಗೂ ಮೆಚ್ಚುಗೆ ಯನ್ನು ವ್ಯಕ್ತಪಡಿಸಬಹುದು ಎಂದು ಎಸ್ಪಿಯವರ ಪ್ರಕಟಣೆ ತಿಳಿಸಿದೆ.

ನೇರ ಫೋನ್‌ ಇನ್ ಕಾರ್ಯಕ್ರಮಕ್ಕೆ ಕರೆ ಮಾಡಿದವರ ವಿವರವನ್ನು ಗುಪ್ತವಾಗಿ ಇಡಲಾಗುವುದು. ಕಾರ್ಯಕ್ರಮ  ಶುಕ್ರವಾರ ಬೆಳಗ್ಗೆ 10 ರಿಂದ 11 ರವರೆಗೆ ನಡೆಯಲಿದೆ. ಸಂಪರ್ಕಿಸುವ ಸ್ಥಿರ ದೂರವಾಣಿ ಸಂಖ್ಯೆ: 0820-2534777.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News