×
Ad

ಭಟ್ಕಳ : ನೇಣು ಬಿಗಿದು ಯುವಕ ಆತ್ಮಹತ್ಯೆ

Update: 2018-07-06 20:22 IST

ಭಟ್ಕಳ, ಜು. 6: ಮಾನಸಿಕವಾಗಿ ನೊಂದ ಯುವಕನೋರ್ವ ಮನೆಯಲ್ಲಿ ಯಾರು ಇಲ್ಲದ ಸಂದರ್ಭ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಣಕುಳಿ ಎಂಬಲ್ಲಿ ಶುಕ್ರವಾರ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಯುವಕನನ್ನು ಮಣಕುಳಿ ನಿವಾಸಿ ನಾಗೇಶ್ ಗಣಪತಿ ನಾಯ್ಕ (22) ಎಂದು ಗುರುತಿಸಲಾಗಿದೆ.

ಕಳೆದ ಎರಡು ವರ್ಷಗಳಿಂದ ಮಾನಸಿಕವಾಗಿ ನೊಂದದ್ದು ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗುತ್ತಿದೆ. ಭಟ್ಕಳ ನಗರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News