ಚಿಕ್ಕಮಗಳೂರು: ಅಪಘಾತದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಖಾಸಗಿ ಆ್ಯಂಬುಲೆನ್ಸ್ ಚಾಲಕ

Update: 2018-07-06 16:45 GMT

ಚಿಕ್ಕಮಗಳೂರು,ಜು.06: ಅಪಘಾತದಲ್ಲಿ ಗಾಯಗೊಂಡು ರಕ್ತದ ಮಡುವಿನಲ್ಲಿದ್ದವರನ್ನು ತನ್ನ ಖಾಸಗಿ ಆ್ಯಂಬುಲೆನ್ಸ್‌ನಲ್ಲಿ ಕರೆದೊಯ್ದು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಘಟನೆ ಶುಕ್ರವಾರ ನಗರದಲ್ಲಿ ವರದಿಯಾಗಿದೆ.

ಚಿಕ್ಕಮಗಳೂರು ನಗರದ ಉಪ್ಪಳ್ಳಿ ನಿವಾಸಿ ಜಿಶಾನ್ ಅಸಾದ್ ಎಂಬುವವರು ರೋಗಿಯೊಬ್ಬರನ್ನು ಚಿಕ್ಕಮಗಳೂರಿನಿಂದ ಹಾಸನಕ್ಕೆ ಕರೆದೊಯ್ಯುವ ಮಾರ್ಗ ಮಧ್ಯೆ ಖಾಸಗಿ ಮಿನಿಬಸ್ ಅಪಘಾತಕ್ಕೆ ಒಳಗಾಗಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಇದನ್ನು ಕಂಡ ಖಾಸಗಿ ಆ್ಯಂಬುಲೆನ್ಸ್ ಚಾಲಕ ಜಿಶಾನ್ ಅಸಾದ್ ಅವರನ್ನು ತನ್ನ ಆ್ಯಂಬುಲೆನ್ಸ್‌ನಲ್ಲಿ ಕರೆದೊಯ್ದು ಹಾಸನ ಆಸ್ಪತ್ರೆಗೆ ಸೇರಿಸಿ ಪ್ರಾಣಪಾಯದಿಂದ ಪಾರು ಮಾಡಿದ್ದಾರೆ. ತನ್ನ ಸೇವೆಗೆ ಹಣವನ್ನು ಪಡೆಯದ ಆ್ಯಂಬುಲೆನ್ಸ್ ಚಾಲಕನ ಸಮಯ ಪ್ರಜ್ಞೆ ಹಾಗೂ ಅವರ ಮಾನವೀಯ ಕೆಲಸಕ್ಕೆ ಸಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News